ಕಲಬುರಗಿ: ‘ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕೊಂಚೂರು ದಿಗ್ಗಿ ತಾಂಡಾ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆಯಿಂದ ಸೃಷ್ಟಿಯಾದ ಕ್ವಾರಿಗೆ ಬಿದ್ದು ಮೃತಪಟ್ಟ 11 ವರ್ಷದ ಬಾಲಕ ರಿತೇಶ ಜಾಧವ ಸಾವು ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು’ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆಗ್ರಹಿಸಿದರು.

‘ಸರ್ವೆ ನಂ.115, 99/4 ಮತ್ತು 99/5 ರಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಅದರಲ್ಲಿ ರಿತೇಶ ಬಿದ್ದು ಅಸುನೀಗಿದ್ದಾನೆ’ ಎಂದು ನಗರದಲ್ಲಿ ಬುಧವಾರ ಪ್ರತಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ನಾನು ಸೇರಿದಂತೆ ಬಾಲಕನ ಕುಟುಂಬಸ್ಥರು, ಗ್ರಾಮಸ್ಥರು ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದೆವು. ಆದರೆ, ರಾತ್ರಿ ಏಕಾಏಕಿ ನೂರಾರು ಪೊಲೀಸರು ಗ್ರಾಮಕ್ಕೆ ಬಂದು ನನ್ನನ್ನು ವಶಕ್ಕೆ ಪಡೆದರು. ಮಹಿಳೆಯರು ಸೇರಿದಂತೆ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಎನ್ಎಸ್ಎಸ್ ಕಾಯ್ದೆ 129 ಅಡಿ ನನ್ನನ್ನು ಅಕ್ರಮವಾಗಿ ವಶಕ್ಕೆ ಪಡೆದು, ವಾಡಿ ಪಟ್ಟಣ, ಎಸ್ಪಿ ಕಚೇರಿ, ಅಲ್ಲಿಂದ ಆಸ್ಪತ್ರೆಗೆ ಸುತ್ತಾಡಿಸಿದ್ದಾರೆ. ಬಳಿಕ ಕಲಬುರಗಿ ಸೆಂಟ್ರಲ್ ಜೈಲಿಗೆ ಅಟ್ಟಿದ್ದಾರೆ. ಇದು ನಮ್ಮ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ದುರವಸ್ಥೆ’ ಎಂದು ಟೀಕಿಸಿದರು.

‘ಪೊಲೀಸರ ವರ್ತನೆ ಕುರಿತು ಈಗಾಗಲೇ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಾಡಿ ಪೊಲೀಸ್ ಠಾಣೆಯ ಪಿಎಸ್ಐ ಅವರಿಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮೇ 14ಕ್ಕೆ ನಿಗದಿಗೊಳಿಸಿದೆ’ ಎಂದು ವಿವರಿಸಿದರು.

‘ಮತ್ತೊಂದೆಡೆ, ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಕುಟುಂಬದ ಸಂಪೂರ್ಣ ಒಪ್ಪಿಗೆಯಿಲ್ಲದೇ ಬಾಲಕನ ಶವ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ಹೀಗಾಗಿ ಬಾಲಕ ರಿತೇಶ ಸಾವಿನ ಬಗ್ಗೆ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯಾಗಬೇಕು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಕೇಶ ಜಮಾದಾರ, ರವಿ ಪವಾರ, ಮೋಹನ ರಾಠೋಡ, ಮಹಾಂತೇಶ ಆಂದೋಲ, ಶ್ರೀಕಾಂತ ಚವ್ಹಾಣ ಸೇರಿದಂತೆ ಹಲವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.