ಕಲಬುರಗಿ: ಕಾಳಗಿ ತಾಲ್ಲೂಕಿನ ಕಂಚನಾಳದ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಸವಳು ಮಣ್ಣು ಅಗೆದು ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

‘ಕಂಚನಾಳ ಗ್ರಾಮದ ಸರ್ವೆ ನಂ. 46ರ ಕಂದಾಯ ಇಲಾಖೆ ಭೂಮಿಯನ್ನು ಸುದರ್ಶನ ರೆಡ್ಡಿ ಎಂಬುವವರು ಒತ್ತುವರಿ ಮಾಡಿಕೊಂಡು, 50–60 ಅಡಿ ಆಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಗುಂಡಿಗಳು ನಿರ್ಮಾಣವಾಗಿದ್ದು, ಅದರಲ್ಲಿ ಜಾನುವಾರುಗಳು ಬಿದ್ದು ಸಾವನ್ನಪ್ಪಿರುವ ಘಟನೆಗಳೂ ವರದಿಯಾಗಿವೆ. ಗ್ರಾಮಸ್ಥರು ಪ್ರಶ್ನಿಸಿದಾಗ ಗೂಂಡಾಗಳಿಂದ ಬೆದರಿಕೆ ಹಾಕಿಸುತ್ತಿದ್ದಾರೆ’ ಎಂದು ಪಕ್ಷದ ಕೊಡ್ಲಿ ಘಟಕದ ಕಾರ್ಯದರ್ಶಿ ಗುರು ನಂದೇಶ ಕೋಣಿನ್ ಆರೋಪಿಸಿದರು.

‘ತಕ್ಷಣವೇ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

‘ಈ ಸಂಬಂಧ ಹಲವು ಬಾರಿ ಮನವಿ ಸಲ್ಲಿಸಿದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಕಾಳಗಿ ತಹಶೀಲ್ದಾರ್ ಅವರನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-34-2108689395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.