ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ ₹61.26 ಕೋಟಿ ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಂಯುಕ್ತವಾಗಿ ಶೇ 50ರ ಅನುಪಾತದಲ್ಲಿ ಈ ವೆಚ್ಚವನ್ನು ಭರಿಸಲಿವೆ. ಇದು ಹಿಂದುಳಿದ ಪ್ರದೇಶವಾಗಿದ್ದು, ಉದ್ದೇಶಿತ ಕೈಗಾರಿಕಾ ವಸಾಹತು ಸ್ಥಾಪನೆಯಿಂದ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ. ಈ ಮೂಲಕ ಕೈಗಾರಿಕೀಕರಣ ಹಾಗೂ ಕೈಗಾರಿಕೆಯಲ್ಲಿ ಸಬಲೀಕರಣಗೊಳ್ಳಲು ಸಹಾಯಕವಾಗುತ್ತದೆ’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-23686207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.