ಕಲಬುರಗಿ: ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಮಾಹಿತಿ ಆಯುಕ್ತ ಬಿ.ವೆಂಕಟ ಸಿಂಗ್ ತಿಳಿಸಿದ್ದಾರೆ.

2025ರ ನವೆಂಬರ್ 24ರಿಂದ 2026ರ ಮಾರ್ಚ್ ಅಂತ್ಯಕ್ಕೆ 2,520 ಪ್ರಕರಣಗಳು ವಿಚಾರಣೆಗೆ ಕೈಗೆತ್ತಿಕೊಂಡು 1,079 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಅರ್ಜಿದಾರರಿಗೆ ಮಾಹಿತಿ ನೀಡಲು ಕಾಲಹರಣ ಮಾಡಿ ಸಮಯ ಮತ್ತು ಆರ್ಥಿಕ ನಷ್ಟ ಉಂಟು ಮಾಡಿದ ಪ್ರಕರಣಗಳಲ್ಲಿ ನೊಂದ ಅರ್ಜಿದಾರರಿಗೆ ₹34 ಸಾವಿರ ಪರಿಹಾರ ಕೊಡಿಸಲಾಗಿದೆ ಎಂದಿದ್ದಾರೆ.

ವಿಶೇಷವಾಗಿ 71 ದಿನಗಳಲ್ಲಿ ಕಳೆದ ಒಂದು ದಶಕದಿಂದ ವಿಲೇವಾರಿಗೆ ಬಾಕಿ ಇದ್ದ ಹಳೇ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಹೊಸ ಪ್ರಕರಣಗಳನ್ನು ಕೈಗೆತ್ತಿಕೊಂಡು, ಶೀಘ್ರ ವಿಚಾರಣೆ ಮುಗಿಸಿ ಅರ್ಜಿದಾರರಿಗೆ ಮಾಹಿತಿ ಕೊಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-34-1005316597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.