ಜೇವರ್ಗಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸಿದ್ನಾಳ ಗ್ರಾಮದಲ್ಲಿ ಸಾಲದ ಹೊರೆಯಿಂದ ಮನನೊಂದ ರೈತರೊಬ್ಬರು ಬುಧವಾರ ಹೊಲದಲ್ಲಿದ್ದ ಬೋರವೆಲ್ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಕ್ಷ್ಮಣ ಶಿವಪ್ಪ ಹಟ್ಟಿ (50) ಆತ್ಮಹತ್ಯೆ ಮಾಡಿಕೊಂಡ ರೈತ. ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ತಮ್ಮ ಹಾಗೂ ಪತ್ನಿ ಹೆಸರಲ್ಲಿ ತಲಾ ₹2 ಲಕ್ಷ ಹಾಗೂ ಖಾಸಗಿಯಾಗಿ ₹6 ಲಕ್ಷ ಸಾಲ ಮಾಡಿದ್ದರು.

‘ಹೊಲದಲ್ಲಿನ ಬೆಳೆ ಕೈಕೊಟ್ಟ ಪರಿಣಾಮ ಸಾಲ ತೀರಿಸಲಾಗದೇ ಲಕ್ಷ್ಮಣ ಅವರು ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪತ್ನಿ ಗಂಗೂಬಾಯಿ ಅವರು ನೆಲೋಗಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್ಐ ಚಿದಾನಂದ ಸವದಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1967451158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.