ಕಲಬುರಗಿ: ಮಲ್ಲಾಬಾದ್ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿಯಲ್ಲಿ ಪಾರದರ್ಶಕ ಕಾಪಾಡಿಕೊಳ್ಳಬೇಕು. ರೈತರ ಸಭೆ ಕರೆದು ಸೂಕ್ತ ಮಾಹಿತಿ ಮತ್ತು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರೆ ಜೂನ್ 9ರಂದು ಜೇವರ್ಗಿಯಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಮುಖಂಡ ಮಹೇಶಕುಮಾರ್ ರಾಠೋಡ ಎಚ್ಚರಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕಿನ ರೈತರ ಬಹುದಿನದ ಬೇಡಿಕೆಯಾದ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿ ಆರಂಭವಾಗಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಯೋಜನೆಯ ನೆಪದಲ್ಲಿ ಗುತ್ತಿಗೆದಾರರು ಭೂಸ್ವಾಧೀನ ಕಾನೂನುಗಳನ್ನು ಗಾಳಿಗೆ ತೂರಿ, ರೈತರಿಗೆ ಸೂಕ್ತ ಪರಿಹಾರ ನೀಡದೆ ಏಕಪಕ್ಷೀಯವಾಗಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ’ ಎಂದು ಅವರು ಹೇಳಿದರು.

‘ಪರಿಹಾರ ನೀಡದೆ ಭೂಮಿ ಸ್ವಾಧೀನಪಡಿಸಿಕೊಳ್ಳುವಂತಿಲ್ಲ ಎಂಬ ಹೈಕೋರ್ಟ್ ಆದೇಶ ಇದೆ. ರೈತರ ಭೂಮಿ ವಶಪಡಿಸಿಕೊಳ್ಳುವಾಗ ಕಾಯ್ದೆ ಅನ್ವಯ ಸಾಮಾಜಿಕ ಪರಿಣಾಮದ ಅಧ್ಯಯನ, ಸಾರ್ವಜನಿಕ ವಿಚಾರಣೆ ಮತ್ತು ನ್ಯಾಯಸಮ್ಮತ ಪರಿಹಾರ ಕಲ್ಪಿಸುವುದು ಕಡ್ಡಾಯ ಎಂಬ ನಿಯಮವೂ ಇದೆ. ಆದರೆ, ಅಧಿಕಾರಿಗಳು ಎಲ್ಲವನ್ನೂ ಗಾಳಿಗೆ ತೂರಿದ್ದಾರೆ’ ಎಂದು ಆರೋಪಿಸಿದರು. ‘ಜೇವರ್ಗಿ ಮತ್ತು ಯಡ್ರಾಮಿ ತಹಶೀಲ್ದಾರರು ರೈತ ಮುಖಂಡರ ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು. ಬಾಬು ಬಿ.ಪಾಟೀಲ, ಇಬ್ರಾಹಿಂ ಪಟೇಲ್ ಯಾಳವಾರ, ರಾಜಾ ಪಟೇಲ್, ಮಹಮ್ಮದ್ ಚೌದರಿ, ಸಾಜಿದ್ ಅಹ್ಮದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-1918789660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.