ಕಲಬುರಗಿ: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನದ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕೆ–ಜಿಐಎಸ್ ಪೋರ್ಟಲ್ನಲ್ಲಿ 20 ಲಕ್ಷ ಸರ್ಕಾರಿ ಆಸ್ತಿಗಳ ಮಾಹಿತಿ ಇದ್ದು, ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಮಾಹಿತಿ ನೀಡಲು 41 ಮೊಬೈಲ್ ಅಪ್ಲಿಕೇಶನ್, 60 ವೆಬ್ ಪೋರ್ಟಲ್ ವಿನ್ಯಾಸಗೊಳಿಸಲಾಗಿದೆ ಎಂದು ಕೇಂದ್ರದ ನಿರ್ದೇಶಕ ರಾಜೇಶ್ ಎನ್.ಎಲ್. ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಕೆ–ಜಿಐಎಸ್ 2.0 ಕುರಿತ ಸ್ಥಳೀಯ ಆಡಳಿತಕ್ಕಾಗಿ ಜಿಐಎಸ್ ಆಧಾರಿತ ಮಾಹಿತಿಯನ್ನು ತಲುಪಿಸುವ ತಾಂತ್ರಿಕ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆಯಾ ಇಲಾಖೆಯ ಮುಖ್ಯ ಕಚೇರಿಯಿಂದ ಪಡೆದು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುತ್ತೇವೆ. ಕಂದಾಯ ಇಲಾಖೆಯ ದಿಶಾಂಕ್ ಅಪ್ಲಿಕೇಶನ್ ನಿರ್ದಿಷ್ಟ ಭೂಮಿಯಲ್ಲಿ ನಿಂತು ಓಪನ್ ಮಾಡಿದರೆ ಸರ್ವೆ ನಂಬರ್, ಮಾಲೀಕರ ಹೆಸರು, ಒಟ್ಟು ವಿಸ್ತೀರ್ಣ ಸೇರಿದಂತೆ ವಿವಿಧ ಮಾಹಿತಿ ಸಿಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದಿಶಾಂಕ್ ಆ್ಯಪ್ನಿಂದ ಹವಾಮಾನ ವರದಿಯನ್ನೂ ಪಡೆಯಬಹುದಾಗಿದೆ. ಹವಾಮಾನ ವರದಿ ಆಧರಿಸಿ ಅಲ್ಲಿಗೆ ಹೋಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಬಹುದಾಗಿದೆ’ ಎಂದರು.

‘ಕೆ–ಜಿಐಎಸ್ ಪೋರ್ಟಲ್ ಬೆಳೆ ವಿಮೆಗಾಗಿ ತಪ್ಪು ಮಾಹಿತಿ ನೀಡಿದ ಪ್ರಕರಣಗಳನ್ನು ಪತ್ತೆ ಹಚ್ಚಿ ಸರ್ಕಾರದ ಅನಗತ್ಯವಾಗಿ ಹಣ ಪಾವತಿಯಾಗುವುದನ್ನು ತಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಾವಿರ 16 ಸಾವಿರ ರೈತರು ದ್ರಾಕ್ಷಿ ಬೆಳೆಯ ವಿಮೆ ಮಾಡಿಸಿಕೊಂಡಿದ್ದರು. ಈ ವರ್ಷ 26 ಸಾವಿರಕ್ಕೆ ಏರಿಕೆಯಾಗಿತ್ತು. ಸ್ಯಾಟಲೈಟ್ ಚಿತ್ರಗಳನ್ನು ಬಳಸಿ ಅರ್ಜಿ ಸಲ್ಲಿಕೆಯಾದ ಸರ್ವೆ ನಂಬರ್ಗಳನ್ನು ಪರಿಶೀಲಿಸಿದಾಗ ಅಲ್ಲಿ ದ್ರಾಕ್ಷಿ ಬೆಳೆ ಇಲ್ಲದಿರುವ ಮಾಹಿತಿ ಸಿಕ್ಕಿತು’ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂದೆ ಮಾತನಾಡಿ, ‘ವಿವಿಧ ಇಲಾಖೆಗಳು ಕೆ–ಜಿಐಎಸ್ನವರು ವಿನ್ಯಾಸಗೊಳಿಸಿದ ದಿಶಾಂಕ್, ದರ್ಪಣ ಸೇರಿದಂತೆ ವಿವಿಧ ಆ್ಯಪ್ಗಳ ಮೂಲಕ ಸಾಕಷ್ಟು ಮಾಹಿತಿ ಸಾರ್ವಜನಿಕರ ಬೆರಳ ತುದಿಯಲ್ಲೇ ಸಿಗುತ್ತಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರದ ತಾಂತ್ರಿಕ ನೆರವನ್ನು ಪಡೆದುಕೊಂಡು ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ 3ಡಿ ಮ್ಯಾಪಿಂಗ್ ಮಾಡಿಸುವ ಸಿದ್ಧತೆ ನಡೆದಿದೆ. ನೆಲಮಹಡಿಗೆ ಅನುಮತಿ ಪಡೆದ ಮನೆಗಳ ಮಾಲೀಕರು ನಂತರ ಮೊದಲನೇ ಹಾಗೂ ಎರಡನೇ ಮಹಡಿಯನ್ನು ಅನುಮತಿ ನೀಡದೇ ಕಟ್ಟಿಸಿಕೊಂಡಿರುತ್ತಾರೆ. ಅದನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಸಾಹಿತ್ಯ ಆಲದಕಟ್ಟಿ ಮಾತನಾಡಿ, ‘ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ರಾಜ್ಯದಲ್ಲೇ ಕಚೇರಿ ಹೊಂದಿರುವ ಇಸ್ರೊ ಅಗತ್ಯ ಸಹಾಯ ಮಾಡುತ್ತಿದೆ. ಇದರಿಂದಾಗಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಸಮರ್ಪಕ ಮಾಹಿತಿಯನ್ನು ಪಡೆಯಬಹುದಾಗಿದೆ. ವಿವಿಧ ಇಲಾಖೆಗಳು ತಮಗೆ ಬೇಕಾದ ಮಾಹಿತಿಯನ್ನು ಒದಗಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ಕೇಂದ್ರದವರು ಅಗತ್ಯಬಿದ್ದರೆ ಸರ್ಕಾರದಿಂದ ಹೆಚ್ಚುವರಿ ಅನುದಾನ ಪಡೆದು ಮೊಬೈಲ್ ಅಪ್ಲಿಕೇಶನ್, ವೆಬ್ ಪೋರ್ಟಲ್ ಮೂಲಕ ಮಾಹಿತಿ ಸಂಗ್ರಹಿಸುತ್ತಾರೆ’ ಎಂದರು.

ಸೇಡಂ ಉಪವಿಭಾಗಾಧಿಕಾರಿ ಪ್ರಭು ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶ ಮೇಘಣ್ಣವರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ವೇದಿಕೆಯಲ್ಲಿದ್ದರು.

ದೂರ ಸಂವೇದಿ ಕೇಂದ್ರದ ಅಧಿಕಾರಿ ಕರುಣಾಕರ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೋಜಿ ಕೇಂದ್ರದಿಂದ ಲಭ್ಯವಾಗುವ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-34-1726210262

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.