ಕಲಬುರಗಿ: ‘ಮೇ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕೆಕೆಆರ್ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸುವರು. ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ, ಡಾ.ಎಸ್.ಬಿ.ಕಾಮರೆಡ್ಡಿ, ಹನುಮಂತರಾವ ದೊಡ್ಮನಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಿಲ್ಲೆಯ 112 ಜನ ಲೇಖಕರ ಪುಸ್ತಕ ಪ್ರದರ್ಶನ ನಡೆಯಲಿದೆ. ಇದೇ ವೇಳೆ ಜಿಲ್ಲೆಯ ಹಿರಿಯ ಪತ್ರಕರ್ತರು, ಕಸಾಪದ ಹಿರಿಯ ಸದಸ್ಯರು, ಪ್ರಮುಖ ಲೇಖಕರು, ಸಂಚಾರ ಪೊಲೀಸ್ ಸಿಬ್ಬಂದಿಯನ್ನು ಸತ್ಕರಿಸಲಾಗುವುದು. ಸಂಗೀತ ಕಲಾವಿದರಿಂದ ಜಾನಪದ, ತತ್ವಪದ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-1500640921

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.