ಕಲಬುರಗಿ: ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕಟ್ಟಿಸಂಗಾವಿ ಸೇತುವೆಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫರಹತಾಬಾದ್ ಗ್ರಾಮದ ನಿವಾಸಿ ಪ್ರಭುದೇವ ಹೊಸಮನಿ (35) ಮೃತರು. ಕೃಷಿ ಮಾಡುತ್ತಿದ್ದ ಪ್ರಭುದೇವ ಬ್ಯಾಂಕ್ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ನೊಂದುಕೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಡೆತ್ನೋಟ್ ಕೂಡ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಶವ ಪತ್ತೆ: ಆತ್ಮಹತ್ಯೆ ಶಂಕೆ?

ಕಲಬುರಗಿ: ನಗರದ ಧರಿಯಾಪುರ ಬಡಾವಣೆಯ ಕಾಡಾ ಕಚೇರಿ ಸಮೀಪದ ಪಾಳು ಕಟ್ಟಡದ ಪ್ರದೇಶದಲ್ಲಿ ಅಂದಾಜು 30 ವರ್ಷದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ‘ವ್ಯಕ್ತಿ ಪಾಳುಬಿದ್ದ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ‘ಅಸಹಜ ಸಾವು’ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-35-1780971469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.