ಕಲಬುರಗಿ: ‘ಮಾಸಾಂತ್ಯದಲ್ಲಿ ನಗರದಲ್ಲಿ ಒಂದು ದಿನದ ಜಿಲ್ಲಾ ಪ್ರಥಮ ಕವಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಅನೇಕ ಹೊಸ ಬರಹಗಾರರು ಕಾವ್ಯ ಕೃಷಿಯಲ್ಲಿ ತೊಡಗಿದ್ದಾರೆ. ಪ್ರಸ್ತುತ ಸಮಾಜದ ಪ್ರಚಲಿತ ವಿಷಯಗಳ ಮೇಲೆ ಕಾವ್ಯ ಕಟ್ಟಿಕೊಳ್ಳಬೇಕಾಗಿದೆ. ಹೀಗಾಗಿ ಸಮ್ಮೇಳನ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

‘ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿ ರಚನೆ, ಜಿಲ್ಲೆಯ ಹಿರಿಯ ಮತ್ತು ಅನುಭವಿ ಕವಿಯೊಬ್ಬರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಶೀಘ್ರದಲ್ಲಿಯೇ ಆಯ್ಕೆ ಮಾಡಲಾಗುವುದು’ ಎಂದರು.

ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಸಿದ್ಧಲಿಂಗ ಜಿ.ಬಾಳಿ, ಬಾಬುರಾವ ಪಾಟೀಲ, ಜಯಶ್ರೀ ಜಮಾದಾರ, ಸೈಯದ್ ನಜಿರುದ್ದೀನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-34-925297894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.