ಕಲಬುರಗಿ: ‘ನಗರದ ಲಾಹೋಟಿ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 28ರಂದು ಬೆಳಿಗ್ಗೆ 10ಕ್ಕೆ ನವ ಕಲ್ಯಾಣ ಕುಂಬಾರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಸುನೀಲ ಕುಮಾರ ಸಿ.ಕುಂಬಾರ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಉದ್ಘಾಟಿಸುವರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್.ಅಪ್ಪ ಜ್ಯೋತಿ ಬೆಳಗಿಸುವರು. ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು ಸೇರಿದಂತೆ ಹಲವರು ಭಾಗವಹಿಸುವರು’ ಎಂದು ಹೇಳಿದರು.

‘ಸಮಾಜ ಹಾಗೂ ಸರ್ವಜ್ಞರ ಕುರಿತು ಪರಿಣತರು ಉಪನ್ಯಾಸ ನೀಡುವರು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಗಾಯಕಿ ಶಿವಾನಿ ಸ್ವಾಮಿ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು’ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಜಿ.ಕುಂಬಾರ, ಗೌರವಾಧ್ಯಕ್ಷರಾದ ಎಸ್.ಕೆ.ಕುಂಬಾರ, ವಿದ್ಯಾಧರ ಕುಂಬಾರ ಸೇರಿ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-34-163715359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.