ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ರಸ್ತೆ ಅಪಘಾತದಲ್ಲಿ ಕಾರ್ಮಿಕ ಮುಖಂಡ ಸಾವು

Published 25 ಮಾರ್ಚ್ 2024, 10:56 IST
Last Updated 25 ಮಾರ್ಚ್ 2024, 10:56 IST
ಅಕ್ಷರ ಗಾತ್ರ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಕಲಬುರಗಿ–ಸೇಡಂ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಮುಖಂಡ ಮಲ್ಲಿನಾಥ ಸಿಂಘೆ (35) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಿಲ್ಲೆಯ ಶಹಾಬಾದ್‌ನವರಾದ ಮಲ್ಲಿನಾಥ ಅವರು ಕಲಬುರಗಿಯಲ್ಲಿ ನೆಲೆಸಿದ್ದರು. ವಾಡಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್‌ ಮೇಲಿಂದ ಕೆಳಕ್ಕೆ ಬಿದ್ದಿದ್ದಾರೆ. ಅಪಘಾತದ ರಭಸಕ್ಕೆ ತಲೆಯ ಭಾಗಕ್ಕೆ ತೀವ್ರ ಹಾನಿಯಾಗಿದ್ದು, ಮೆದುಳು ಹೊರಕ್ಕೆ ಬಂದಿದೆ.

ಸ್ಥಳಕ್ಕೆ ಮಾಡಬೂಳ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದರು.

ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT