ಕಲಬುರಗಿ: ‘ಕಾರ್ಮಿಕ ವಿರೋಧಿಯಾಗಿರುವ ನೂತನ ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು ಮತ್ತು ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಶೀಘ್ರವೇ ಪ್ರಕಟಿಸಬೇಕು’ ಎಂದು ಒತ್ತಾಯಿಸಿ ಸಿ.ಐ.ಟಿ.ಯು ಜಿಲ್ಲಾ ಸಮಿತಿಯ ಸದಸ್ಯರು ನಗರದ ಉಪಕಾರ್ಮಿಕ ಆಯುಕ್ತರ ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.

‘ಈ ಮೊದಲಿನ 29 ಕಾರ್ಮಿಕ ಸಂಹಿತೆಗಳು ಒಂದಿಷ್ಟು ಪ್ರಮಾಣದಲ್ಲಿ ಕಾರ್ಮಿಕರಿಗೆ ರಕ್ಷಣೆ ನೀಡುತ್ತಿದ್ದವು. ಆದರೆ, ಯಾವುದೇ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹೋರಾಟದ ಮತ್ತು ಉದ್ಯೋಗ ಭದ್ರತೆಯ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ಇವು ಬಂಡವಾಳಶಾಹಿಗಳ ಅನುಕೂಲಕ್ಕಾಗಿ ರೂಪಿಸಲಾಗಿರುವ ಸಂಹಿತೆಗಳಾಗಿದ್ದು, ಕಾರ್ಮಿಕರ ಪಾಲಿಗೆ ಮರಣ ಶಾಸನಗಳಾಗಿವೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ಮುಂದಾಗಿರುವುದು ಖಂಡನೀಯ. ಶೋಷಿತರ ಪರ ಮತ್ತು ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಈ ಸಂಹಿತೆಗಳನ್ನು ಪುನರ್ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.

‘ಕೇರಳ ಮತ್ತು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರದ ಈ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಈಗಾಗಲೇ ರಾಜ್ಯ ವಿಧಾನಸಭೆಗಳ ಮೂಲಕ ತಿರಸ್ಕರಿಸಿ ತಮ್ಮ ರಾಜ್ಯದ ಕಾರ್ಮಿಕರ ಹಿತ ಕಾಯ್ದುಕೊಳ್ಳಲು ಮುಂದಾಗಿವೆ. ಇದೇ ಮಾದರಿಯನ್ನು ಕರ್ನಾಟಕ ವಿಧಾನಸಭೆಯಲ್ಲೂ ಅನುಸರಿಸಬೇಕು' ಎಂದರು.

‘ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪರಿಷ್ಕರಣೆಯಾಗಿ ಏಳು ವರ್ಷ ಕಳೆದಿದೆ. ಅಲ್ಲದೆ ಕನಿಷ್ಠ ವೇತನ ಸಲಹಾಮಂಡಳಿ ರಾಜ್ಯ ಸರ್ಕಾರಕ್ಕೆ 2025ರ ಆಗಸ್ಟ್ನಲ್ಲಿಯೇ ತನ್ನ ಅಭಿಪ್ರಾಯಗಳನ್ನು ತಿಳಿಸಿದೆ. ಆದರೆ, ರಾಜ್ಯ ಸರ್ಕಾರ ಈವರೆಗೂ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಇವತ್ತಿನ ಗ್ರಾಹಕ ಬೆಲೆ ಸೂಚ್ಯಂಕ ಮತ್ತು ಇತರ ಖರ್ಚುಗಳ ಆಧಾರದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಕೂಡಲೇ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಬಿ. ಸಜ್ಜನ್ ಮಾತನಾಡಿ, ‘ಮಾ. 3ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ನಮ್ಮ ಜಿಲ್ಲೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದು ಈಗಾಗಲೇ ಪುನರ್ ಪರಿಶೀಲನೆಗಾಗಿ ಕಾರ್ಮಿಕ ಇಲಾಖೆ, ಮಾಲೀಕರು ಮತ್ತು ಕಾರ್ಮಿಕ ಸಂಘಟನೆಗಳ ಒಳಗೊಂಡ ಸಮಿತಿ ರಚಿಸಿದೆ’ ಎಂದು ತಿಳಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಶಾಂತ ಘಂಟೆ, ಖಜಾಂಚಿ ನಾಗಯ್ಯ ಸ್ವಾಮಿ, ಸಿ.ಐ.ಟಿ.ಯು ಸಂಯೋಜಿತ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಷನ್ ಸಂಚಾಲಕ ಶ್ರೀಮಂತ ಬಿರಾದರ, ಬಿಸಿಯೂಟ ನೌಕರ ಸಂಘದ ಅಧ್ಯಕ್ಷ ವಿಜಯಲಕ್ಷ್ಮಿ, ಅಂಗನವಾಡಿ ನೌಕರ ಸಂಘದ ಅಧ್ಯಕ್ಷೆ ಗೌರಮ್ಮ, ವೈದ್ಯಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ದಯಾನಂದ ಪಾಟೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260306-34-974237609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.