ಕಲಬುರಗಿ: ಕಾಳಗಿ ತಾಲ್ಲೂಕಿನ ಕಂಚನಾಳದಲ್ಲಿ ಗೈರಾಣಿ ಭೂಮಿ ಒತ್ತುವರಿ ಮಾಡಿಕೊಂಡು, ಸವಳು ಮಣ್ಣು ಅಗೆದು ಮಾರಾಟ ಮಾಡಲಾಗುತ್ತಿದ್ದು, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ಕೋಡ್ಲಿ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

‘ಸುದರ್ಶನ ರೆಡ್ಡಿ ಎಂಬ ವ್ಯಕ್ತಿ ಕಳೆದ ಸುಮಾರು ಒಂದು ವರ್ಷದಿಂದ ಗೈರಾಣಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು, ಅದರಲ್ಲಿ 50ರಿಂದ 60 ಅಡಿ ಆಳದವರೆಗೆ ಮಣ್ಣು ಅಗೆದು ಮಾರಾಟ ಮಾಡುತ್ತಿದ್ದಾರೆ. ಸ್ಥಳೀಯರು ಈ ಬಗ್ಗೆ ಪ್ರಶ್ನಿಸಿದಾಗ ಖಾಸಗಿ ಗೂಂಡಾಗಳ ಮೂಲಕ ಬೆದರಿಕೆ ಹಾಕಿಸುತ್ತಿದ್ದಾರೆ’ ಎಂದು ಪಕ್ಷದ ಕಾರ್ಯದರ್ಶಿ ಗುರುನಂದೇಶ ಕೋಣಿನ್ ದೂರಿದರು.

‘ಅಕ್ರಮ ಗಣಿಗಾರಿಕೆಯಿಂದ ಉಂಟಾದ ದೊಡ್ಡ ಗುಂಡಿಗಳಲ್ಲಿ ಹಲವು ದನ–ಕರುಗಳು ಮತ್ತು ಕಾಡು ಪ್ರಾಣಿಗಳು ಬಿದ್ದು ಸಾವನ್ನಪ್ಪಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅನುಮತಿಯಿಲ್ಲದೆ ಗಣಿಗಾರಿಕೆ ನಡೆಸಿದ ವ್ಯಕ್ತಿಯ ಜೊತೆಗೆ ಇದಕ್ಕೆ ಸಹಕಾರ ನೀಡಿದ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-34-937054635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.