ಅಫಜಲಪುರ: ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಭೂರಹಿತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಮೀನು ಖರೀದಿಗಾಗಿ ಅರ್ಜಿ ಸಲ್ಲಿಸಿ ನಾಲ್ಕು ವರ್ಷ ಕಳೆದರೂ ಈ ಬಗ್ಗೆ ಕ್ರಮವಹಿಸಿದೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಆದಷ್ಟು ಬೇಗ ಅರ್ಜಿಗಳನ್ನು ಆದ್ಯತೆ ಅನುಸಾರ ಫಲಾನುಭವಿಗಳಿಗೆ ಭೂಮಿ ಸಿಗುವಂತೆ ಮಾಡಬೇಕು’ ಎಂದು ಮಹಾನಾಯಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ನಾಗೇಶ ಕೊಳ್ಳಿ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಯೋಜನೆಯಡಿ ಅನೇಕ ಬಡ ರೈತರು ಹಾಗೂ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ಇದರಿಂದ ಭೂವಂಚಿತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದ್ದಾರೆ.

‘ಸರ್ಕಾರ ಕೂಡಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಭೂಒಡೆತನವನ್ನು ಮಂಜೂರು ಮಾಡಿ, ಜಮೀನು ಖರೀದಿ ಪ್ರಕ್ರಿಯೆಯನ್ನು ವೇಗಗೊಳಿಸಬೇಕು. ಒಂದು ವೇಳೆ ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಕಲಬುರಗಿ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಎದುರು ಎಲ್ಲಾ ರೈತರು ಹಾಗೂ ಅರ್ಜಿದಾರರನ್ನು ಒಳಗೊಂಡು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಕೊಳ್ಳಿ ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-31-1501928767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.