ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ ಲೋಕಸಭಾ ಕ್ಷೇತ್ರ: 11 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆ

Published 19 ಏಪ್ರಿಲ್ 2024, 16:20 IST
Last Updated 19 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರದಂದು 11 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಕುಮಾರ ಭೀಮಶಾ, ಶರಣಬಸಪ್ಪ ಪೀರಪ್ಪ, ಶರಣಪ್ಪ ಮರಲಿಂಗಪ್ಪ, ವೆಂಕಟೇಶ್ವರರಾವ್ ಅಮೃತರಾವ್, ರವೀಂದ್ರ ಕಲ್ಲಯ್ಯ ಸ್ವಾಮಿ, ಜ್ಯೋತಿ ರಮೇಶ, ಸುಂದರ ಮೇಘು, ಹುಸೇನಪ್ಪ ಬಂದೆಪ್ಪ, ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ಅಭ್ಯರ್ಥಿಯಾಗಿ ವಿಜಯ ಗೋವಿಂದ ಜಾಧವ, ಭಾರತೀಯ ಪೀಪಲ್ಸ್ ಪಾರ್ಟಿಯ ಅಭ್ಯರ್ಥಿಯಾಗಿ ಶಂಕರ ಲಿಂಬಾಜಿ ಜಾಧವ, ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಿವಪುತ್ರ ಮರೆಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಏಪ್ರಿಲ್ 22ರವರೆಗೆ  ಹಿಂದಕ್ಕೆ ಪಡೆಯಲು ಅವಕಾಶವಿದೆ. ಇಲ್ಲಿಯವರೆಗೆ 23 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಸಿದಂತಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT