ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ ಲೋಕಸಭಾ ಕ್ಷೇತ್ರ: ಗುರುಮಠಕಲ್‌ನಲ್ಲಿ ’ಕೈ’ ಕಾರ್ಯಕರ್ತರ ಬೃಹತ್ ಸಭೆ

Published 29 ಏಪ್ರಿಲ್ 2024, 6:22 IST
Last Updated 29 ಏಪ್ರಿಲ್ 2024, 6:22 IST
ಅಕ್ಷರ ಗಾತ್ರ

ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ.‌

ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೆರೆಯ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತರೆಡ್ಡಿ, ನಟಿ ವಿಜಯಶಾಂತಿ, ಸಚಿವರಾದ ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ,‌ ಮಾಜಿ ಸಚಿವ ಬಾಬುರಾವ ಚಿಂಚನಸೂರ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡಮನಿ ಪರ ಮತ ಯಾಚಿಸಲಿದ್ದಾರೆ.‌

ಎಐಸಿಸಿ ಅಧ್ಯಕ್ಷರ ತವರು ಕ್ಷೇತ್ರವಾಗಿರುವ ಕಾರಣ ದೇಶದ ಗಮನ ಸೆಳೆದಿರುವ ಕಲಬುರಗಿ ಕ್ಷೇತ್ರ ಚುನಾವಣಾ ಪ್ರಚಾರದ ಕಾವು ದಿನ ದಿನಕ್ಕೆ ಹೆಚ್ಚಾಗುತ್ತಿದೆ.

ತೆಲಂಗಾಣ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಗುರುಮಠಕಲ್ ಭಾಗದಲ್ಲಿ ತೆಲುಗು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅವರ ಮತ ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ.

ಬಿಗಿ ಬಂದೋಬಸ್ತ್

ಕಾರ್ಯಕರ್ತರ ಸಭೆ ಅಂಗವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದೆ.

ಕಾಕಲವಾರ ರಸ್ತೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ಮಧ್ಯಾಹ್ನ 12 ಗಂಟೆಗೆ ಖರ್ಗೆ ಸೇರಿದಂತೆ ಹಲವರು ಆಗಮಿಸಲಿದ್ದಾರೆ.‌ ಈಗಾಗಲೇ ಜಿಲ್ಲಾ, ಸ್ಥಳೀಯ ಮುಖಂಡರು ವೇದಿಕೆಗೆ ಆಗಮಿಸಿದ್ದಾರೆ‌‌.

ಬೃಹತ್ ವೇದಿಕೆ ನಿರ್ಮಾಣ

ಗುರುಮಠಕಲ್-ಚಪೆಟ್ಲಾ ರಸ್ತೆಯಲ್ಲಿ ಬೃಹತ್ ಪೆಂಡಾಲ್ ಹಾಕಿ ವೇದಿಕೆ ನಿರ್ಮಿಸಿದ್ದು, ಗುರುಮಠಕಲ್ ಮತಕ್ಷೇತ್ರದ ಮತದಾರರು ವಿವಿಧ ವಾಹನಗಳಲ್ಲಿ ಆಗಮಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT