ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಹಾಗೂ ಆರ್ಎಸ್ಎಸ್ ವಿಷಕಾರಿ ಹಾವುಗಳಂತೆ. ಹಾವು ಬಂದರೆ, ನಮಾಜ್ ಅನ್ನು ಅರ್ಧಕ್ಕೆ ನಿಲ್ಲಿಸಿ ಅದನ್ನು ಕೊಲ್ಲಬೇಕು ಎಂದು ಹೇಳಿ ಪ್ರಚೋದನಾ ಹೇಳಿಕೆ ನೀಡಿದ್ದು ಖಂಡನೀಯ’ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅವರ ಹೇಳಿಕೆಗಳು ಕೇವಲ ರಾಜಕೀಯ ಟೀಕೆಗಳಲ್ಲದೆ ಸಮಾಜದಲ್ಲಿ ಉದ್ವಿಗ್ನತೆ ಮತ್ತು ಅಶಾಂತಿವುಂಟು ಮಾಡುತ್ತಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಚೋದನಾತ್ಮಕ ಹೇಳಿಕೆ ನೀಡುವ ಮೂಲಕ ಜಾತಿ–ಜಾತಿಗಳಲ್ಲಿ, ಧರ್ಮ–ಧರ್ಮಗಳಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಇವರ ಹೇಳಿಕೆಗಳ ಕುರಿತು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾದಳ ಅಥವಾ ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ತಾಪುರ ಬಿಜೆಪಿ ಎಸ್ಸಿ ಮೋರ್ಚಾ ತಾಲ್ಲೂಕು ಅಧ್ಯಕ್ಷ ಗುಂಡು ಮತ್ತಿಮೂಡ, ದೇವರಾಜ ತಳವಾರ, ಶ್ರೀಕಾಂತ ಸಾಲೇಗಾಂವ, ಆಕಾಶ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-34-1018549249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.