ಚಿತ್ತಾಪುರ (ಕಲಬುರಗಿ ಜಿಲ್ಲೆ): ಕಳೆದ ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ ಗಂಡ ಶನಿವಾರ ನೇಣಿಗೆ ಶರಣಾಗಿದ್ದಾನೆ.
ಅಲ್ಲೂರ್ (ಬಿ) ಗ್ರಾಮದ ಬಸವರಾಜ ಹಂಪಯ್ಯ (40) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡ ಸಾವಿಗೆ ಶರಣಾಗಿರುವ ವ್ಯಕ್ತಿ.
ತನ್ನ ಪತ್ನಿ ಹಣಮವ್ವ (35) ಅವರನ್ನು ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿ ತಲೆಮರೆಸಿಕೊಂಡಿದ್ದ.
ಬಸವರಾಜನ ಪತ್ತೆಗೆ ಚಿತ್ತಾಪುರ ಪೊಲೀಸರು ಶೋಧ ಕಾರ್ಯ ನಡೆಸಿದ್ದರು.
ಶನಿವಾರ ರಾತ್ರಿ ಬಸವರಾಜನ ಮನೆಯಿಂದ ದುರ್ವಾಸನೆ ಹರಡುತ್ತಿರುವುದು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಭೇಟಿ ನೀಡಿದಾಗ ಬಸವರಾಜ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಸಿಪಿಐ ಪ್ರಕಾಶ ಯಾತನೂರು, ಪಿಎಸ್ಐ ಶ್ರೀಶೈಲ್ ಅಂಬಾಟಿ ಪರಿಶೀಲಿಸಿದರು.
ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.