ಕಲಬುರಗಿ: ‘ಜಿಲ್ಲೆಯಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಕಂಡುಬಂದಲ್ಲಿ ಅಥವಾ ಅದಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ದೂರು ದಾಖಲಾದರೂ ಅಲ್ಲಿನ ಸ್ಥಳೀಯ ಸಂಸ್ಥೆಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದರು.

ತಮ್ಮ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಸಮಸ್ಯೆಗಳು ಈಗಾಗಲೇ ಆರಂಭವಾಗಿದ್ದು, ಯಾರೂ ಸಹ ಕೈಯಿಂದ ಸ್ವಚ್ಛತೆ ಮಾಡಬಾರದು ಹಾಗೂ ಮಾಡಿಸಬಾರದು. ಈ ಕುರಿತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಮಷಿನ್ ಬಂದು ಸ್ವಚ್ಛತೆ ಮಾಡುತ್ತದೆ ಎಂಬ ಜಾಗೃತಿಯನ್ನು ಜನರಲ್ಲಿ ಮೂಡಿಸಬೇಕು’ ಎಂದರು.

ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ನಗರಸಭೆ ಆಯುಕ್ತರು ಸೇರಿ ಸಭೆ ನಡೆಸಿ ಅವರ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯಡಿ ಸರ್ಕಾರ ಜಾರಿಗೆ ತಂದಿರುವ ಸವಲತ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಈವರೆಗೆ ಯಾವುದೇ ಕ್ರಮ ಆಗಿಲ್ಲವೆಂದು ಅಧಿಕಾರಿಗಳ ಕೆಲಸದ ಕುರಿತು ಅಸಮಾದಾನ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿ.ಪಂ. ಮುಖ್ಯ ಯೋಜನಾ ಅಧಿಕಾರಿ ಎಸ್.ಎಸ್. ಮಠಪತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್, ಡಿಯುಡಿಸಿ ಜಿಲ್ಲಾ ಯೋಜನಾ ನಿರ್ದೇಶಕ ಮುನಾವರ್ ದೌಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-34-1689239438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.