ಕೆಂಭಾವಿ: ‘ಈ ಭಾಗದ ಮಠಮಾನ್ಯಗಳು ಧಾರ್ಮಿಕತೆಯ ಜೊತೆಗೆ ಸಾಮಾಜಿಕ ಕಾರ್ಯಗಳು ಹಾಗೂ ಯುವಕರಿಗೆ ಉತ್ತಮ ಮಾರ್ಗದರ್ಶನ ನಿಡುತ್ತಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಸಮೀಪದ ಕರಡಕಲ್ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರಡಕಲ್ ಕೋರಿಸಿದ್ದೇಶ್ವರ 26ನೇ ಜಾತ್ರಾ ಮಹೋತ್ಸವ ಹಾಗೂ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೋರಿಸಿದ್ದೇಶ್ವರರ ಪುಣ್ಯ ಕ್ಷೇತ್ರವಾದಲ್ಲಿ ನವ ಜೀವನಕ್ಕೆ ಕಾಲಿಟ್ಟ ದಂಪತಿಗಳ ಜೀವನ ಸುಖಮಯವಾಗಲೆಂದು ಶುಭ ಹಾರೈಸಿದರು.

‘ಬಡಜನರು ವಿವಾಹ ಹೆಸರಿನಲ್ಲಿ ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಲು ಸಾಮೂಹಿಕ ವಿವಾಹ ಉತ್ತಮ ನಡೆಯಾಗಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ₹50 ಸಾವಿರ ಸಹಾಯಧನ ನೀಡುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಿ, ಮಠಗಳ ಏಳ್ಗೆಗಾಗಿ ಮಠದ ಭಕ್ತರ ಜೊತೆಜೊತೆಗೆ ನಾವು ನಿಮ್ಮೊಂದಿಗಿದ್ದೆವೆ, ಈಗಾಗಲೇ ಸಮುದಾಯ ಭವನಕ್ಕೆ ₹50 ಲಕ್ಷ ನೀಡಲಾಗಿದ್ದು ಕಾಮಗಾರಿ ಪೂರ್ಣಗೊಂಡಿದೆ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು’ ಎಂದರು.

‘ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿವೆ, ಈ ನಿಟ್ಟಿನಲ್ಲಿ ಈ ಭಾಗದ ಅನೇಕ ಮಠಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಹೇಳಿದರು.

ಈ ಸಂಧರ್ಭದಲ್ಲಿ 12 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು.

ಸಾಹಿತಿ ಪ್ರಕಾಶ್ ಕನ್ನಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಮಠದ ಶಾಂತರುದ್ರಮುನಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು, ಕೆಂಭಾವಿ ಕೋರಿಸಿದ್ದೇಶ್ವರ ಮಠದ ಬೀರಪ್ಪ ಶರಣರು, ಡಿಸಿಸಿ ಬ್ಯಾಂಕ್ ನಿರ್ದೆಶಕ ಬಸವರಾಜ ಪಾಟೀಲ ಚಿಂಚೋಳಿ, ಶಹಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿಮಾಹಂತ ಚಂದಾಪುರ, ಮಲ್ಲನಗೌಡ ಹಗರಟಗಿ, ಪಿಎಸ್ಐ ಅಮೀಜ ಕಾಂಬ್ಳೆ ವೇದಿಕೆ ಮೇಲಿದ್ದರು.

ಮಠದ ವಕ್ತಾರ ಶಿವಪ್ರಕಾಶ ಸ್ವಾಮಿ ಸ್ವಾಗತಿಸಿದರು, ಮಲ್ಲಿಕಾರ್ಜುನ ಹಿರೇಮಠ ನಿರೂಪಿಸಿದರು. ಶರಣಗೌಡ ಪಾಟೀಲ ವಂದಿಸಿದರು. ಶರಣಕೂಮಾರ ಯಾಳಗಿ, ತೋಟೇಂದ್ರ ಕೂಮಾರ ಕರಡಕಲ್ ಇವರಿಂದ ಸಂಗೀತ ಸೇವೆ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-30-280234142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.