ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಚುನಾವಣೆಯು ಆಗಸ್ಟ್ 7ರಂದು ನಡೆಸಲಾಗುವುದು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

ಪಾಲಿಕೆಯ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನವನ್ನು ಹಿಂದುಳಿದ (ಬ) ವರ್ಗಕ್ಕೆ ಮೀಸಲಾಗಿದೆ. 22ನೇ ಅವಧಿಯ ಕಾಂಗ್ರೆಸ್ನ ಮೇಯರ್ ಯಲ್ಲಪ್ಪ ನಾಯಕೊಡಿ ಹಾಗೂ ಉಪಮೇಯರ್ ಹೀನಾ ಬೇಗಂ ಅವರ ಆಡಳಿತ ಮುಕ್ತಾಯವಾಗಲಿದೆ.

ಬರೋಬ್ಬರಿ ಒಂದು ವರ್ಷದ ಬಳಿಕ ನಗರದ ‘ಪ್ರಥಮ ಪ್ರಜೆ’ಯ ಚುನಾವಣೆಗಾಗಿ ‘ಕೈ’ ಮತ್ತು ‘ಕಮಲ’ ಪಾಳೆಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಜೆಡಿಎಸ್ನ ನಾಲ್ವರು ಸದಸ್ಯರ ಮೈತ್ರಿಯ ಬಲವಿದೆ. 55 ಸದಸ್ಯ ಬಲದ ಪಾಲಿಕೆಯಲ್ಲಿ ನಗರ ವ್ಯಾಪ್ತಿಯ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಮತದ ಹಕ್ಕು ಪಡೆದಿದ್ದಾರೆ.

ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಸುನಿಲ್ ವಲ್ಲ್ಯಾಪುರೆ, ಬಿ.ಜಿ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಮತ್ತು ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರು ಮತದಾನದ ಹಕ್ಕು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.