ಕಲಬುರಗಿ: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಚೈತನ್ಯ ಕಾರ್ಯಕ್ರಮದಡಿ ಜಿಲ್ಲೆಯ ವಿವಿಧ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಅಧಿಕಾರಿ ತಿಳಿಸಿದ್ದಾರೆ.

ಜೂ.3ರಂದು ಕಲಬುರಗಿ ಮಹಿಳಾ ರಾಜ್ಯ ನಿಲಯ ಮತ್ತು ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರ, 4ರಂದು ದೇವಲಗಾಣಗಾಪುರ, 5ರಂದು ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ, 6, 11 ಹಾಗೂ 20ರಂದು ಕಲಬುರಗಿ ಕೇಂದ್ರ ಕಾರಾಗೃಹ, 9ರಂದು ಚಿಂಚೋಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, 11ರಂದು ಕಲಬುರಗಿ ವೃದ್ಧಾಶ್ರಮ, 12ರಂದು ಅಫಜಲಪುರ ತಾಲ್ಲೂಕು ಆಸ್ಪತ್ರೆ, 16ರಂದು ಚಿತ್ತಾಪುರ ತಾಲ್ಲೂಕು ಆಸ್ಪತ್ರೆ, 18ರಂದು ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರ, 19ರಂದು ಜೇವರ್ಗಿ ತಾಲ್ಲೂಕು ಆಸ್ಪತ್ರೆ, 23ರಂದು ಸೇಡಂ ತಾಲ್ಲೂಕು ಆಸ್ಪತ್ರೆ ಹಾಗೂ 24ರಂದು ಕಲಬುರಗಿ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶಿಬಿರ ನಡೆಯಲಿದೆ.

ಮಾನಸಿಕ ಕಾಯಿಲೆ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳನ್ನು ಸಮುದಾಯದಲ್ಲಿ ಗುರುತಿಸಿ ಅವರನ್ನು ಈ ಶಿಬಿರ ನಡೆಯುವ ದಿನಾಂಕದಂದು ಕರೆತಂದು ತಜ್ಞರಿಗೆ ತೋರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಅವರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-723222462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.