ಕಲಬುರಗಿ: ‘ನಗರದ ಎಂ.ಜಿ. ರಸ್ತೆಯಲ್ಲಿ ಸುಮಾರು ₹3 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆ ಆಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಗಿದೆ.

‘ಕಾಮಗಾರಿಯನ್ನು ಅಂದಾಜುಪತ್ರಿಕೆ ಪ್ರಕಾರ ಮಾಡುತ್ತಿಲ್ಲ. ಇದರಿಂದ ಕೆಲವೇ ದಿನಗಳಲ್ಲಿ ರಸ್ತೆ ಹದಗೆಡುವ ಸಾಧ್ಯತೆ ಇದೆ. ನಾಲೆಗಳು ರಸ್ತೆಗಿಂತ ಎತ್ತರದಲ್ಲಿ ನಿರ್ಮಾಣ ಆಗಿದ್ದರಿಂದ ಮಳೆಗಾಲದಲ್ಲಿ ನೀರು ರಸ್ತೆಯ ಮೇಲೆಯೇ ನಿಲ್ಲುವ ಪರಿಸ್ಥಿತಿ ಇದೆ ಎಂದು ಸಂತ್ರಾಸವಾಡಿಯ ಜನ ದೂರುತ್ತಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳಿಸದಿದ್ದರೆ ಎಂ.ಜಿ. ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸ ಲಾಗುವುದು’ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ್ ಫರಹ ತಾಬಾದ್ ಎಚ್ಚರಿಸಿದ್ದಾರೆ. ಸುರೇಶ ಹನ ಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ, ಪಿಂಟು ಜಮಾದಾರ, ಹುಲಿಕಂಠ, ಮಲ್ಲು, ದರ್ಶನ ಹಾಗೂ ಶ್ರೀಮಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-641277015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.