ಕಲಬುರಗಿ: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಜಿಲ್ಲೆಯ ಪ್ರಿಯಾಂಕ್ ಖರ್ಗೆ ಹಾಗೂ ಡಾ.ಶರಣಪ್ರಕಾಶ ಪಾಟೀಲ ಅವರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೊದಲ ಹಂತದ ಸಂಪುಟದಲ್ಲೇ ‘ಮಂತ್ರಿಗಿರಿ’ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಗೆ ಈ ಮೂಲಕ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಂಪುಟದಲ್ಲಿ ವಿಶೇಷ ಪ್ರಾತಿನಿಧ್ಯ ನೀಡಿದಂತಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರೂ ಆಗಿರುವ ಪ್ರಿಯಾಂಕ್ ಅವರು ಚಿತ್ತಾಪುರ ವಿಧಾನಸಭಾ ಮೀಸಲು ಕ್ಷೇತ್ರದಿಂದ ಗೆದ್ದು ಮೂರು ಸಲ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಅವಧಿಯಲ್ಲಿ ನಾಲ್ಕನೇ ಬಾರಿಗೆ ಸಚಿವ ಸ್ಥಾನ ಒಲಿದಿದೆ. ಒಂದೆಡೆ ಜಿಲ್ಲೆಯಲ್ಲಿನ ಅಭಿವೃದ್ಧಿ ಕಾರ್ಯಗಳು, ಮತ್ತೊಂದೆಡೆ ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧ ಟೀಕೆಗಳ ಮೂಲಕ ಪ್ರಿಯಾಂಕ್ ಅವರು ಪಕ್ಷವನ್ನು ಪ್ರಬಲವಾಗಿ ಸಮರ್ಥಿಸಿಕೊಳ್ಳುತ್ತ ಬಂದಿದ್ದಾರೆ. ಪಕ್ಷದಲ್ಲಿ ಪ್ರಭಾವಿ ನಾಯಕ ಎನಿಸಿದ್ದಾರೆ. ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಪಡೆಯುವ ಪ್ರಬಲ ಆಕಾಂಕ್ಷಿಯೂ ಎನಿಸಿದ್ದರು. ಆದರೆ, ಸದ್ಯಕ್ಕೆ ಆ ‘ಪದವಿ’ ದೊರೆತಿಲ್ಲ.

ಪ್ರಿಯಾಂಕ್ 2013ರಲ್ಲಿ ಮೊದಲ ಸಲ ಗೆದ್ದಿದ್ದರು. ಆಗ 2016ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. 2018ರಲ್ಲಿ ಗೆದ್ದಾಗಲೂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು. 2023ರಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಹುದ್ದೆಗೇರಿದರು. ಆಗಲೂ ಪ್ರಿಯಾಂಕ್ ಅವರಿಗೆ ಸಚಿವ ಸ್ಥಾನ ಒಲಿದಿತ್ತು.

ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ, ಸಜ್ಜನ ರಾಜಕಾರಣಿ ಎಂದೇ ಹೆಸರಾಗಿರುವ ಸೇಡಂ ಶಾಸಕ ಡಾ.ಶರಣಪ್ರಕಾಶ ಆರ್.ಪಾಟೀಲ ಅವರಿಗೆ ಮೂರನೇ ಬಾರಿಗೆ ‘ಮಂತ್ರಿಗಿರಿ’ ಒಲಿದಿದೆ. ಕಲಬುರಗಿಯನ್ನು ಕಲ್ಯಾಣ ಕರ್ನಾಟಕದ ‘ಹೆಲ್ತ್ ಹಬ್’ ಆಗಿಸುವುದು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ. 371(ಜೆ) ದಶಮಾನೋತ್ಸವ ಅಂಗವಾಗಿ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಸೇರಿದಂತೆ ನಗರ ಹಾಗೂ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳಿಗೆ ವಿಶೇಷ ಮುತುವರ್ಜಿ ವಹಿಸಿದ್ದು ಶರಣಪ್ರಕಾಶ್ ಅವರಿಗೆ ಬಲ ತಂದಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಉಳಿದ ಶಾಸಕರಿಗೆ ಮಂತ್ರಿಗಿರಿ ಕುತೂಹಲ

ಜಿಲ್ಲೆಯ ಇಬ್ಬರಿಗೆ ಸಚಿವ ಸ್ಥಾನಗಳು ಸಿಕ್ಕಿದ್ದರೂ, ಇನ್ನುಳಿದ ಸಚಿವ ಸ್ಥಾನದ ಆಕಾಂಕ್ಷಿಗಳ ಪೈಕಿ ಮುಂದಿನ ‘ವಿಸ್ತರಣೆ’ಯಲ್ಲಿ ಯಾರೆಲ್ಲ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಇನ್ನೂ ಉಳಿದಿದೆ.

ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಿ.ಆರ್.ಪಾಟೀಲ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಮೊದಲ ಹಂತದಲ್ಲೇ ಸಂಪುಟ ಸೇರಿಸುವ ನಿರೀಕ್ಷೆಯಲ್ಲಿದ್ದರು. ಸದ್ಯಕ್ಕೆ ಅವರಿಗೆ ಅವಕಾಶ ಸಿಕ್ಕಿಲ್ಲ. ಎರಡನೇ ವಿಸ್ತರಣೆಯತ್ತ ‘ಚಿತ್ತ’ ನೆಟ್ಟಿದ್ದಾರೆ. ಶಾಸಕ ಎಂ.ವೈ.ಪಾಟೀಲರು, ಶಾಸಕ ಅಲ್ಲಮಪ್ರಭು ಪಾಟೀಲರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು.260604-34-421523483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.