ಕಲಬುರಗಿ: ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ತಂದೆಯ ಆರೈಕೆಗೆ ಆಸ್ಪತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಅತ್ಯಾಚಾರ ಮಾಡಿದ ಕೃತ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ:

ಕಲಬುರಗಿ ತಾಲ್ಲೂಕಿನ ಗ್ರಾಮವೊಂದರ ವ್ಯಕ್ತಿ ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದರು. ಪತ್ನಿ ಅಂಗವಿಕಲರಾದ ಕಾರಣ ತಮ್ಮ ಆರೈಕೆಗೆ 17 ವರ್ಷದ ಪ್ರಥಮ ಪಿಯುಸಿ ಓದುತ್ತಿರುವ ಮಗಳನ್ನು ಅವರು ಕರೆ ತಂದಿದ್ದರು.

‘ಒಂದು ವಾರದಿಂದ ತಂದೆ–ಮಗಳು ಆಸ್ಪತ್ರೆಯಲ್ಲಿದ್ದರು. ಅವರದೇ ಊರಿನ ವ್ಯಕ್ತಿಯೊಬ್ಬ ಅದೇ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ. ಆತನ ಮೂಲಕ ನಿತ್ಯ ಬಟ್ಟೆ ಮತ್ತಿತರ ಸಾಮಗ್ರಿಯನ್ನು ತರಿಸಿಕೊಳ್ಳುತ್ತಿದ್ದರು. ನಿಮ್ಮ ಮನೆಯಿಂದ ಕೊಟ್ಟಿರುವ ಬಟ್ಟೆ ತರಲು ಮಗಳನ್ನು ಕಳುಹಿಸಿ ಎಂದು ಆ ವ್ಯಕ್ತಿ ಹೇಳಿದ್ದ. ಬಟ್ಟೆ ತರಲು ಹೋದಾಗ ವೈದ್ಯಕೀಯ ಕಾಲೇಜಿನ ವಿಶ್ರಾಂತಿ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದಾನೆ’ ಎಂದು ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ವಿಶ್ವವಿದ್ಯಾಲಯ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.