ಕಲಬುರಗಿ: ‘ವಿಧಾನ ಪರಿಷತ್ ಸ್ಥಾನವನ್ನು ಕೋಲಿ, ಕಬ್ಬಲಿಗ ಸಮುದಾಯದ ನಾಯಕರಿಗೆ ನೀಡಬೇಕು’ ಎಂದು ರಾಜ್ಯ ಕೋಲಿ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸುಭಾಷ ಜಮಾದಾರ ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಶ್ರಮಿಸುತ್ತಿರುವ ಶರಣಪ್ಪ ಮಾನೇಗಾರ, ಭೀಮಣ್ಣಾ ಸಾಲಿ, ರಾಜಗೋಪಾಲರೆಡ್ಡಿ, ಹುಲಿಗೆಪ್ಪ ಕನಕಗಿರಿ ಇವರಲ್ಲಿ ಯಾರಾದರೂ ಒಬ್ಬರಿಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

‘ಅಲ್ಲದೆ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹಾಗೂ ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಅವರನ್ನು ಕೈ ಬಿಟ್ಟು, ಇವರ ಸ್ಥಾನದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದರು.

ರಾಜ್ಯ ಉಪಾಧ್ಯಕ್ಷ ಕಲ್ಯಾಣ ನಾಟೀಕಾರ್, ರಾಜ್ಯ ಕಾರ್ಯದರ್ಶಿ ದತ್ತಪ್ಪ ಟಿ.ಜಮಾದಾರ, ಗಣಪತರಾವ ಎ. ಅಂಕಲಗಿ, ಮಲ್ಲಿಕಾರ್ಜುನ ಎಸ್.ಕೋಡ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-1792073335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.