ಗುರುವಾರ , ಸೆಪ್ಟೆಂಬರ್ 23, 2021
24 °C

ಡಿ.ಕೆ. ಶಿವಕುಮಾರ್ ಭೇಟಿಯಾದ ಕಲಬುರ್ಗಿ ಪಾಲಿಕೆಯ ನೂತನ ಸದಸ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದ 27 ಜನ ಸದಸ್ಯರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ವಿಚಾರವನ್ನು ಶಿವಕುಮಾರ್ ತಮ್ಮ ಫೇಸ್‌ಬುಕ್‌ ‍ಪುಟದಲ್ಲಿ ಬರೆದುಕೊಂಡಿದ್ದಾರೆ.

ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು ಬೇಕಿರುವ ಸರಳ ಬಹುಮತ ಯಾವ ಪಕ್ಷಕ್ಕೂ ಸಿಕ್ಕಿಲ್ಲ. ಹಾಗೂ ಕಾಂಗ್ರೆಸ್, ಬಿಜೆಪಿ ಜೆಡಿಎಸ್‌ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲು ಹವಣಿಸುತ್ತಿವೆ.

ಇತ್ತೀಚೆಗೆ ಚುನಾಯಿತರಾದ ನಾಲ್ವರು ಜೆಡಿಎಸ್‌ ಸದಸ್ಯರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದನ್ನೂ ಓದಿ... ಸಿ.ಎಂ ನಾಲ್ಕು ಬಾರಿ ದೆಹಲಿಗೆ ಹೋಗಿಬಂದರೂ ನಯಾಪೈಸೆ ಉಪಯೋಗವಾಗಿಲ್ಲ: ಕಾಂಗ್ರೆಸ್

ಕೆಪಿಸಿಸಿ ವಕ್ತಾರರೂ ಆದ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಸದಸ್ಯರೊಂದಿಗೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು