ಬುಧವಾರ, ಅಕ್ಟೋಬರ್ 20, 2021
24 °C

ಕಲಬುರ್ಗಿ: ಸಾಕು ನಾಯಿ ವಿಚಾರಕ್ಕೆ ಜಗಳ, ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುರಾಜ್ ಕುಲಕರ್ಣಿ

ಕಲಬುರ್ಗಿ: ಇಲ್ಲಿನ ಅಕ್ಕಮಹಾದೇವಿ ಕಾಲೊನಿಯಲ್ಲಿ, ಹೈಕೋರ್ಟ್ ಮುಂಭಾಗ ಗುರುವಾರ ತಡರಾತ್ರಿ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.

ಗುರುರಾಜ್ ಕುಲಕರ್ಣಿ (35) ಕೊಲೆಯಾದವರು. ಪವನ್ ಜಹಾಗೀರದಾರ್ ಆರೋಪಿ.

'ಗುರುರಾಜ ಅವರು ಸಾಕಿದ್ದ ನಾಯಿಗೆ ಪವನ್ ಪದೇ ಪದೇ ಕಲ್ಲು ಹೊಡೆಯುತ್ತಿದ್ದರು. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಕೊಲೆಗೆ ಇದೇ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

'ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು ಕರೆದಿದ್ದರು. ಗುರುವಾರ ರಾತ್ರಿ ಮಾತುಕತೆ ನಡೆದ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಹೊಡೆದಾಡುವ ವೇಳೆ ಗುರುರಾಜ ಮೇಲೆ ಪವನ್ ಕಲ್ಲಿನಿಂದ ಹಲ್ಲೆ ಮಾಡಿದ. ತೀವ್ರ ರಕ್ತಸ್ರಾವದಿಂದ ಗುರುರಾಜ ಸ್ಥಳದಲ್ಲೇ ಮೃತಪಟ್ಟರು' ಎಂದು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು