ಕಲಬುರಗಿ: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಹೋರಾಟ ಮಾಡಿದ ವಿದ್ಯಾರ್ಥಿ ಮುಖಂಡರ ಬಂಧನವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಪದಾಧಿಕಾರಿಗಳು ನಗರದ ಎಸ್ವಿಪಿ ವೃತ್ತದಲ್ಲಿ ಮಂಗಳ ವಾರ ಪ್ರತಿಭಟನೆ ನಡೆಸಿದರು.

ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷೆ ಲವಿತ್ರ ವಸ್ತ್ರದ ಮಾತನಾಡಿ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತಂತೆ ಸರಿಯಾದ ತನಿಖೆ ಮತ್ತು ಎನ್ಟಿಎ ರದ್ದು ಮಾಡುವಂತೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿ ಮುಖಂಡರನ್ನು ಕ್ರಿಮಿನಲ್ಗಳಂತೆ ಹೊತ್ತೊಯ್ದು ಬಂಧಿಸಿರುವ ರಾಜ್ಯ ಪೊಲೀಸ್ ಇಲಾಖೆಯ ನಡೆ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮೇ 3ರಂದು ನಡೆದ ನೀಟ್–ಯುಜಿ ಪರೀಕ್ಷೆಯಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ರದ್ದುಗೊಳಿಸಿತ್ತು. ಮರುಪರೀಕ್ಷೆ ಮಾಡುವುದಾಗಿ ಘೋಷಣೆ ಮಾಡಿದೆ. ಈ ಮೂಲಕ ಎನ್ಟಿಎ ಪರೀಕ್ಷೆಗಳ ನಿರ್ವಹಣೆಯಲ್ಲಿ ತನ್ನ ಅಸಮರ್ಥತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ’ ಎಂದು ಅವರು ದೂರಿದರು.

‘ಒಂದೆಡೆ ಯುವಜನರನ್ನು ನಿರುದ್ಯೋಗಿಗಳನ್ನಾಗಿಸಿ ಅವರನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಲಾಗುತ್ತಿದೆ. ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ದಿನೆದಿನೇ ಹೆಚ್ಚಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಖಾಲಿ ಹುದ್ದೆಗಳು ಖಾಲಿಯಾಗಿಯೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ವರ್ಷಾನುಗಟ್ಟಲೇ ವೈದ್ಯರಾಗಬೇಕೆಂದು ಕನಸು ಕಂಡ 22 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಚಿಂತಿಸುವಂತಾಗಿದೆ’ ಎಂದರು.

ಡಿವೈಎಫ್ಐ ಜಿಲ್ಲಾ ಸಂಚಾಲಕ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಪ್ರದೀಪ್, ಅಂಕಿತಾ, ಅಕ್ಷರಾ, ಅನಿತಾ, ಸುಧಾರಾಣಿ, ಶಾಂತಮ್ಮ, ರಾಧಿಕಾ, ವೈಷ್ಣವಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-34-1131776090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.