ಕಲಬುರಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು. ಎನ್ಟಿಎ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಇಸ್ಲಾಮಿಕ್ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಘಟನೆಯ ಮುಖಂಡ ಮುಬೀನ್ ಅಹಮ್ಮದ್ ಮಾತನಾಡಿ, ‘22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಮೊದಲೇ ಸೋರಿಕೆಯಾಗಿರುವುದು, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುಸಿತ ಎತ್ತಿ ತೋರಿಸುತ್ತದೆ’ ಎಂದು ಆಪಾದಿಸಿದರು.

‘ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ಎನ್ಟಿಎ ವಿಫಲವಾಗಿದೆ. ಆದ್ದರಿಂದ, ಪರೀಕ್ಷಾ ವ್ಯವಸ್ಥೆಯ ವಿಕೇಂದ್ರೀಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು ಎಂದು ಆಗ್ರಹಿಸಿದರು.

‘ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು ಮತ್ತು ಜಾಲಗಳ ವಿರುದ್ಧ ಪಾರದರ್ಶಕ ತನಿಖೆಯಾಗಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ನ್ಯಾಯಸಮ್ಮತ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕು’ ಎಂದು ಹೇಳಿದರು.

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಅಬ್ದುಲ್ ಮಾಜೀದ್ ಖಾನ್, ಅಬ್ದುಲ್ ರೆಹಮಾನ್, ಅಬ್ದುಲ್ ನಾಸೀರ್, ಅಮ್ಮಾರ್, ಸಯ್ಯದ್ಉದ್ದೀನ್, ಮುಬೀರ್ ಅಹಮ್ಮದ್ ಸೇರಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-34-1960523277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.