ಅಫಜಲಪುರ: ಮಾಶಾಳ ಗ್ರಾಮಕ್ಕೆ ಕಳೇದ 10 ವರ್ಷಗಳಿಂದ ಕುಡಿಯುವ ನೀರು ರಸ್ತೆಗಾಗಿ ಮತ್ತು ಇತರೆ ಕೆಲಸ ಕಾರ್ಯಗಳಿಗಾಗಿ ಸರ್ಕಾರ ಅನುದಾನ ನೀಡಿದೆ. ಆದರೆ ನೀಡಿರುವ ಅನುದಾನದ ಕೆಲಸ ಕಾರ್ಯಗಳ ಬಗ್ಗೆ ನಿರ್ವಹಣೆ ಕೊರತೆಯಿಂದ ಜನರಿಗೆ ಸೌಲಭ್ಯ ದೊರೆಯುತ್ತಿಲ್ಲ. ಮಾಶಾಳ ಗ್ರಾಮ ತಾಲ್ಲೂಕಿನಲ್ಲಿ ದೊಡ್ಡ ಗ್ರಾಮವಾಗಿದ್ದು, ಅದಕ್ಕಾಗಿಯೇ ಆ ಗ್ರಾಮಕ್ಕೆ ತಲಾ ₹ 19 ಲಕ್ಷದಲ್ಲಿ 4 ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಜೂರು ಮಾಡಲಾಗಿತ್ತು, ಆದರೆ ನಿರ್ವಹಣೆ ಇಲ್ಲದೇ ಅವು ಹಾಳಾಗಿ ಹೋಗಿವೆ.

ಮಾಶಾಳ ಗ್ರಾಮದ ಬಾಳು ತಾಂಡಾ, ಮಾಶಾಳ ವಾಡಿ ಪರಿಶಿಷ್ಟ ಓಣಿಯಲ್ಲಿ ಮತ್ತು ಪರಿಶಿಷ್ಟ ದೇವಸ್ಥಾನದ ಹತ್ತಿರ 4 ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಾಗಿದೆ. ಇದರಲ್ಲಿ ಬಸವೇಶ್ವರ ದೇವಸ್ಥಾನದ ಹತ್ತಿರ ಶುದ್ಧ ನೀರಿನ ಘಟಕಗಳ ಯಂತ್ರಗಳು ಕಳುವಾಗಿವೆ, ಹೀಗಾಗಿ ಅನುದಾನ ಖರ್ಚಾದರೂ ಇಲ್ಲಿಯವರೆಗೆ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ, ಮಶಾಳ ಗ್ರಾಮದಲ್ಲಿ ವಿವಿಧ ಯೋಜನೆ ಅಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ಪ್ಲೊರೈಡ್ ಅಂಶ ಇರುವದರಿಂದ ಜನರಿಗೆ ಕಿಡ್ನಿ ಸಮಸ್ಯೆ, ಮೊಳಕಾಲು ಸಮಸ್ಯೆ ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಕಳೇದ 3 ವರ್ಷದಲ್ಲಿ ಶಾಸಕ ಎಂ.ವೈ.ಪಾಟೀಲರು ಮಾಶಾಳ ಗ್ರಾಮಕ್ಕೆ ವಿವಿಧ ಯೋಜನೆ ಅಡಿಯಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ, ಆದರೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಮಾಶಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವು ಪ್ಯಾಟಿ ಅವರು ಮಾಹಿತಿ ನೀಡಿ ಸರ್ಕಾರ ಕುಡಿಯುವ ನೀರಿಗಾಗಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿದರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರ ನಿರ್ಲಕ್ಷ್ಯಕ್ಕೆ ನಮಗೆ ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ. ಶುದ್ಧ ನೀರಿನ ಘಟಕ ಹಾಳಾಗಿರುವ ಬಗ್ಗೆ ಬೆಂಗಳೂರು ಸಹಾಯವಾಣಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅವರು ಹೇಳುತ್ತಾರೆ.

ಈ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜನೀಯ ಶಂಕರ್ ರುಭೀಕರ ಅವರನ್ನು ವಿಚಾರಿಸಿದಾಗ ತಾಲ್ಲೂಕಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಗುತ್ತಿಗೆಯನ್ನು ಹೈದ್ರಾಬಾದ ಮೂಲದ ಕಂಪನಿಗೆ ನೀಡಲಾಗಿತ್ತು, ಅವರು ಅಪೂರ್ಣ ಮಾಡಿ ಹೋಗಿದ್ದಾರೆ. ಇದರ ಬಗ್ಗೆ ಮತ್ತೊಮ್ಮೆ ಟೆಂಡರ್ ಕರೆದು ದುರಸ್ತಿ ಮಾಡಲಾಗುವದು. ಮಾಶಾಳ ಗ್ರಾಮದಲ್ಲಿ 4 ಶುದ್ಧ ಕುಡಿ ನೀರಿನ ಘಟಕವನ್ನು ಈ ಹಿಂದೆ ಇಲಾಖೆ ಮೂಲಕ ನಿರ್ಮಿಸಲಾಗಿದೆ ಅವುಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಿ ಅವುಗಳನ್ನು ಜನರಿಗೆ ಉಪಯೋಗವಾಗುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಮಾಶಾಳ ಗ್ರಾಮಕ್ಕೆ ಹಿರಿಯಾಳ ಬ್ಯಾರೇಜ್‌ನಿಂದ ಮತ್ತು ಉಡಚಾಣ ಗ್ರಾಮದಿಂದಲೂ ಸುಮಾರು ₹ 7 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿ ಮಾಡಲಾಗಿದೆ. ಅದು ಸಹ ವಿಫಲವಾಗಿದ್ದು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ದೊರೆಯುತ್ತಿಲ್ಲ, . ಜನಪ್ರತಿನಿಧಿಗಳಾದವರೂ ಯಾವುದೇ ಗ್ರಾಮಕ್ಕೆ ಅನುದಾನ ನೀಡಿದ ಮೇಲೆ ಅದು ಯಾವ ರೀತಿ ಸದ್ಭಳಿಕೆಯಾಗಿದೆ ಎಂಬುದನ್ನು ನೋಡಬೇಕಾಗುತ್ತದೆ, ಅಂದಾಗ ಮಾತ್ರ ಯೋಜನೆ ಫಲಕಾರಿಯಾಗುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

15 ದಿನಗಳ ಹಿಂದೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿ ಮಾಡುವಂತೆ ತಾಕೀತು ಮಾಡಲಾಗಿದೆ.ಈ ಕುರಿತು ಮತ್ತೊಮ್ಮೆ ಸಭೆ ಕರೆದಾಗ ವಿಚಾರಣೆ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು.

ಎಂ.ವೈ.ಪಾಟೀಲ.

ಶಾಸಕರು

ಮಾಶಾಳ ಗ್ರಾಮಕ್ಕೆ ಶುದ್ಧ ಕುಡಿವ ನೀರಿನ ಘಟಕಗಳ ಸ್ಥಾಪನೆಗೆ ಮಾಡಿರುವ ಅನುದಾನ ಜನರಿಗೆ ಪ್ರಯೋಜನವಾಗುತ್ತಿಲ್ಲ. ಕೆಟ್ಟು ನಿಂತಿರುವ ಘಟಕಗಳನ್ನು ದುರಸ್ತಿ ಮಾಡಬೇಕು ಮಳೆಗಾಲ ಆರಂಭವಾಗುತ್ತದೆ ಜನರಿಗೆ ನೀರಿನಿಂದ ಹೆಚ್ಚಿನ ಕಾಯಿಲೆಗಳು ಬರುತ್ತವೆ, ಅದಕ್ಕಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಗ್ರಾಮಕ್ಕೆ ಭೇಟಿ ನೀಡಿ ಶುದ್ಧ ನೀರಿನ ಘಟಕಗಳ ಪರಿಸ್ಥಿತಿಯನ್ನು ಅರಿತುಕೊಂಡು ತಕ್ಷಣ ಅವುಗಳನ್ನು ದೃಷ್ಟಿ ಮಾಡಬೇಕು.

ಶ್ಯಾಮರಾವ್ ಪ್ರಧಾನಿ

ಅಧ್ಯಕ್ಷರು ಗ್ರಾಮ ಪಂಚಾಯಿತಿ ಮಾಶಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.