ಕಲಬುರಗಿ: ‘ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು. ಸಾರ್ವಜನಿಕರ ಸಮಸ್ಯೆ ಆಲಿಸಿ ಸ್ಪಂದಿಸಲಾಗುವುದು’ ಎಂದು ನೂತನ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದರು.

‘ಇದು ಪ್ರತಿಷ್ಠಿತ ಜಿಲ್ಲೆ. ಕಲ್ಯಾಣ ಕರ್ನಾಟಕ ಕಂದಾಯ ವಿಭಾಗದ ಕೇಂದ್ರ ಸ್ಥಾನವೂ ಆಗಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಕೌಶಲಾಭಿವೃದ್ಧಿ, ಯುವಜನರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಜೊತೆಗೆ ರಸ್ತೆಗಳ, ಇಂಧನ, ಕೈಗಾರಿಕೆಗಳ ಅಭಿವೃದ್ಧಿ, ಕೈಗಾರಿಕರಣದ ಮೂಲಕ ಉದ್ಯೋಗ ಸೃಷ್ಟಿಗೂ ಸಮಾನ ಒತ್ತು ಆದ್ಯತೆ ನೀಡಲಾಗುವುದು. ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿ ಅನುಷ್ಠಾನ ಮಾಡುವ ಉದ್ದೇಶ ಹೊಂದಿರುವೆ’ ಎಂದು ವಿವರಿಸಿದರು.

‘ಈ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಬೃಹತ್ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಅವೆಲ್ಲ ವಿನ್ಯಾಸಮಟ್ಟದಿಂದ ಹಿಡಿದು ವಿವಿಧ ಹಂತಗಳಲ್ಲಿವೆ. ಅವುಗಳ ಪ್ರಗತಿಗೆ ಚುರುಕು ನೀಡಿ, ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಜಿಲ್ಲೆಯ ಎಲ್ಲರ ಸಹಕಾರ ಬಯಸುವೆ’ ಎಂದರು.

ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪವಿಭಾಗಾಧಿಕಾರಿಗಳಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲ್ಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ರಾಜ್ಯ ಸರ್ಕಾರ ಇತ್ತೀಚೆಗೆ ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನದ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿತ್ತು. ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್ ಶರೀಫ್ ಅವರನ್ನು ನಿಯೋಜಿಸಿತ್ತು.

ಕರ್ನಾಟಕ ಮೂಲದ ಇಕ್ರಮ್ ಶರೀಫ್ ಅವರು ಅಮೆರಿಕದ ವರ್ಜೀನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.(ಅರ್ಥಶಾಸ್ತ್ರ) ಪದವಿ ಪಡೆದಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿದ್ದವು. ಇವರು 2024ರ ಜುಲೈನಿಂದ ಇಲ್ಲಿಯವರೆಗೆ ಹಣಕಾಸು ಇಲಾಖೆಯಲ್ಲಿ ಆಯವ್ಯಯ ಸಿದ್ದಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-1228172739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.