ಕಲಬುರಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರ್ನ 2016ನೇ ಬ್ಯಾಚ್ನ ಐಎಎಸ್ ಅಧಿಕಾರಿ ಇಕ್ರಮ್ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು.

ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನದ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿತ್ತು. ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್ ಶರೀಫ್ ಅವರನ್ನು ನಿಯೋಜಿಸಿತ್ತು.

ಕರ್ನಾಟಕ ಮೂಲದ ಇಕ್ರಮ್ ಶರೀಫ್ ಅವರು ಅಮೆರಿಕಾದ ವರ್ಜೀನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.(ಅರ್ಥಶಾಸ್ತ್ರ) ಪದವಿ ಪಡೆದಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿತ್ತು. ಇವರು ಕಳೆದ 2024ರ ಜುಲೈನಿಂದ ಇಲ್ಲಿಯವರೆಗೆ ಹಣಕಾಸು ಇಲಾಖೆಯಲ್ಲಿ ಆಯವ್ಯಯ ಸಿದ್ದಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪವಿಭಾಗಾಧಿಕಾರಿಗಳಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲ್ಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.