ಕಲಬುರಗಿ: ನಗರದ ಐವಾನ್ ಇ ಶಾಹಿ ಪ್ರದೇಶದಲ್ಲಿ ಹಲವು ಪ್ರಮುಖ ಶಿಕ್ಷಣ ಸಂಸ್ಥೆಗಳಿದ್ದು, ಬಸ್ ನಿಲ್ದಾಣದಿಂದ ಸರ್ದಾರ್ ಪಟೇಲ್ ವೃತ್ತದ ಮೂಲಕ ಪಿಡಿಎ ಎಂಜಿನಿಯರಿಂಗ್ ಕಾಲೇಜು, ಸ್ಟೇಶನ್ ಬಜಾರ್ ಸರ್ಕಾರಿ ಪಿಯು ಕಾಲೇಜು, ಸರ್ಕಾರಿ ಬಿ.ಇಡಿ. ಕಾಲೇಜು, ಎಂ.ಎಸ್. ಇರಾನಿ ಕಾಲೇಜು, ವಿ.ಜಿ. ಮಹಿಳಾ ಕಾಲೇಜು, ಲಾಹೋಟಿ ಕಾನೂನು ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರ ಸಾರಿಗೆ ಬಸ್ ಓಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಈ ಶಿಕ್ಷಣ ಸಂಸ್ಥೆಗಳಲ್ಲಿ ಸಾವಿರಾರು ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ನಿತ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ನಡೆದುಕೊಂಡು ಬರುತ್ತಿದ್ದಾರೆ.

ಕೇಂದ್ರ ಬಸ್ ನಿಲ್ದಾಣ, ಸೂಪರ್ ಮಾರ್ಕೆಟ್ ಹಾಗೂ ರಾಮಮಂದಿರ ಭಾಗದಿಂದ ಸರ್ದಾರ್ ಪಟೇಲ್ ವೃತ್ತದಿಂದ ಐವಾನ್ ಇ ಶಾಹಿ ರಸ್ತೆ ಮಾರ್ಗವಾಗಿ ವಿ.ಜಿ. ಮಹಿಳಾ ಕಾಲೇಜು, ಪಿಡಿಎ ಎಂಜಿನಿಯರಿಂಗ್ ಕಾಲೇಜು, ಸರ್ಕಾರಿ ಬಿ.ಇಡಿ ಕಾಲೇಜು, ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಮಾರ್ಗವಾಗಿ ವಿಜಯ ವಿದ್ಯಾಲಯ ಮುಂಭಾಗದಿಂದ ಸಂಚರಿಸಲು ಸೂಕ್ತ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ರಾಜಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೊಡ್ಡೇಶ ನಾಯಕ, ಅಂಬರೀಶ, ಮಹಾಲಿಂಗ ಪೂಜಾರಿ, ಚನ್ನವೀರ, ಮಾಳಪ್ಪ ಮೋರಟಗಿ, ಮಲ್ಲಿಕಾರ್ಜುನ ತಳವಾರ ಕೆಕೆಆರ್ಟಿಸಿಗೆ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-34-1861897929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.