ಕಲಬುರಗಿ: ಖಜಾನೆ ಇಲಾಖೆ, ಮಹಾಲೇಖಪಾಲರ ಕಚೇರಿ ಹಾಗೂ ರಾಜ್ಯ ಸಿವಿಲ್ ಪಿಂಚಣಿ ಪಾವತಿ ಬ್ಯಾಂಕ್ಗಳ ಸಹಯೋಗದೊಂದಿಗೆ ಮೇ 15ರಂದು ಬೆಳಿಗ್ಗೆ 11 ಗಂಟೆಗೆ ‘ಪಿಂಚಣಿ ಅದಾಲತ್’ ಹಾಗೂ ಅಂದು ಮಧ್ಯಾಹ್ನ 2.30ಕ್ಕೆ ಜಿ.ಪಿ.ಎಫ್. ಅದಾಲತ್ನ್ನು ನಗರದ ಜಿಲ್ಲಾಧಿಕಾರಿ ಕಚೇರಿಯ ವಿ.ಸಿ. ಕೊಠಡಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಗೆ ಸಂಬಂಧಿಸಿದ ನಿವೃತ್ತ/ಕುಟುಂಬ ಪಿಂಚಣಿದಾರರು ಮೇಲ್ಕಂಡ ದಿನದಂದು ನಡೆಯುವ ಈ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆ ಹಾಗೂ ಅಹವಾಲುಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ. ಅಹವಾಲುಗಳನ್ನು ಒಂದು ದಿನ ಮುಂಚಿತವಾಗಿ ಜಿಲ್ಲಾ ಖಜಾನೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.