ಕಲಬುರಗಿ: ಬ್ಯಾಗ್ಗಳಲ್ಲಿ ಗಾಂಜಾ ಸಾಗಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬುಧವಾರ ಬಂಧಿಸಿರುವ ವಿಶ್ವವಿದ್ಯಾಲಯ ಠಾಣೆ ಪೊಲೀಸರು, ಆರೋಪಿಯಿಂದ ₹ 6,43,300 ಮೌಲ್ಯದ 6 ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಸೋಳೆಪುರ ಗ್ರಾಮದ ದೇವರಾಜ ನಾಯಕ ಭೀಮಾನಾಯಕ (38) ಬಂಧಿತ ಆರೋಪಿ.

ನಗರದ ಕೋಟನೂರ (ಡಿ) ಸಮೀಪದ ವಾಜಪೇಯಿ ಬಡಾವಣೆ ರಸ್ತೆ ಬದಿಯಲ್ಲಿ ಬ್ಯಾಗ್ಗಳಲ್ಲಿ ಗಾಂಜಾ ಇಟ್ಟುಕೊಂಡು, ಅದನ್ನು ಬೇರೆಡೆಗೆ ಸಾಗಿಸಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಯಿಂದ ₹1,200 ನಗದು, ಮೊಬೈಲ್ ಸಹ ಜಪ್ತಿ ಮಾಡಲಾಗಿದೆ.

ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅವರ ಮಾರ್ಗದರ್ಶನದಲ್ಲಿ ಡಿಸಿಪಿ ಪ್ರವೀಣ ನಾಯಕ್, ಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಸಿದ್ದಪ್ಪ ಸೈದಾಪುರ ಹಾಗೂ ಸಿಬ್ಬಂದಿ ಈರಣ್ಣ, ಸಂಜಯಕುಮಾರ, ವಿಠಲ್, ಪ್ರಕಾಶ, ರಾಜಕುಮಾರ ಪವಾರ, ನಾಗೇಂದ್ರ, ಶಿವಶರಣ, ಸಿದ್ದಣ್ಣ, ಮಹೇಶ, ಯಶ್ವಂತರಾವ, ಶಿವಶರಣಪ್ಪ ಅವರನ್ನೊಳಗೊಂಡ ತಂಡ ದಾಳಿ ನಡೆಸಿದೆ.

ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-34-1716415420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.