ಕಲಬುರಗಿ: ಕಲಬುರಗಿ ವಿಭಾಗದ ಅಂಚೆ ಕಚೇರಿಯಿಂದ ಅಂಚೆ ಜೀವ ವಿಮೆ (ಪಿ.ಎಲ್.ಐ.) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ (ಆರ್.ಪಿ.ಎಲ್.ಐ.) ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ (ಏಜೆಂಟರು) ನಿಯುಕ್ತಿಗಾಗಿ ಮೇ 28 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜವಳಿ ಕಾಂಪ್ಲೆಕ್ಸ್ ಎದುರಿನ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೇವರ್ಗಿ, ಕಲಬುರಗಿ, ಕಮಲಾಪುರ, ಆಳಂದ, ಕಾಳಗಿ, ಅಫಜಲಪುರ ಹಾಗೂ ಚಿಂಚೋಳಿ ತಾಲ್ಲೂಕುಗಳ 18ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಲಬುರಗಿ ಜಿಲ್ಲೆಯ ವಾಸಸ್ಥಳ ಪ್ರಮಾಣಪತ್ರ ಹೊಂದಿರಬೇಕು.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಯಾವುದೇ ವೇತನ ಅಥವಾ ಭತ್ಯೆ ಇರುವುದಿಲ್ಲ. ಜೀವ ವಿಮೆಗಳ ವ್ಯವಹಾರವನ್ನಾಧರಿಸಿ ಸೂಕ್ತ ಕಮಿಷನ್ ಕೊಡಲಾಗುತ್ತದೆ. ಅಭ್ಯರ್ಥಿಗಳು ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಹಾಗೂ ದೂರ ವಾಣಿ ಸಂಖ್ಯೆ 08472–263800 ಹಾಗೂ ಮೊ. 73533 51111 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-34-1676808714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.