ಕಲಬುರಗಿ: ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪ್ರಿಯಾಂಕ್ ಖರ್ಗೆ ಅವರಿಗೆ ಮುಂಬರುವ ಸಚಿವ ಸಂಪುಟ ರಚನೆ ವೇಳೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಎಸ್.ಜಮಾದಾರನೇತೃತ್ವದಲ್ಲಿ ನಗರದ ಕೆಬಿಎನ್ ದರ್ಗಾದಲ್ಲಿ 500 ತೆಂಗಿನಕಾಯಿ ಒಡೆದು, ಹಣ್ಣು ಹಂಪಲುಗಳನ್ನು ಭಕ್ತರಿಗೆ ವಿತರಿಸಲಾಯಿತು.

‘ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ–ಬಿಟಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಸಮರ್ಥ ಆಡಳಿತ ನಡೆಸುವುದರ ಮೂಲಕ ರಾಜ್ಯದ ಕಟ್ಟ ಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಕೊಟ್ಟು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಹಕರಿಸಿದ್ದಾರೆ. ಅಷ್ಟೇ ಅಲ್ಲದೆ ಯುವ ಜನತೆಯ ಕಣ್ಮಣಿಯಾಗಿ ನಿರಂತರವಾಗಿ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಖರ್ಗೆ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ಜನತೆ ಹಾಗೂ ರಾಜ್ಯದ ಜನತೆಗಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಚಿವ ಪ್ರಿಯಾಂಕ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.

‘ಚಿತಾಪುರ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಸೋಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಅನುದಾನ ಒದಗಿಸಿ ಚಿತ್ತಾಪುರ ಕ್ಷೇತ್ರದ ಸರ್ವಾಂಗಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಲ್ಲದೆ ಬಡ ನಿರ್ಗತಿಕ ಮಕ್ಕಳ ಬದುಕಿನಲ್ಲಿ ಬೆಳಕು ನೀಡಲು ಹಲವಾರು ವಿದ್ಯಾ ಸಂಸ್ಥೆಗಳನ್ನು ಆರಂಭಿಸಿದ್ದಾರೆ’ ಎಂದರು.

ಅಂಬಾರಾಯ ಜವಳಗಾ, ಭೀಮಶ್ಯಾ ಖನ್ನಾ, ದುಂಡಪ್ಪ ಜಮಾದಾರ, ಮಲ್ಲಿಕಾರ್ಜುನ ವಾಲೀಕಾರ, ಬಾಬು ವಿಜಾಪುರ, ದೇವೇಂದ್ರ ಜಮಾದಾರ, ಯಲ್ಲಾಲಿಂಗ, ಗೌತಮ್, ಅಭಿಷೇಕ್, ಶರಣು ಜಮಾದಾರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-69046192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.