ಕಲಬುರಗಿ: ‘ಯಡ್ರಾಮಿ ತಾಲ್ಲೂಕಿನ ಇಜೇರಿ ಹೊರವಲಯದಲ್ಲಿ ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಬಾಲಕಿಯರು ಅನುಮಾನಾಸ್ಪದ ರೀತಿಯಲ್ಲಿ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಆಗ್ರಹಿಸಿ ಏಪ್ರಿಲ್ 21ರಂದು ಜೇವರ್ಗಿಯಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸಿದ್ದರಾಮೇಶ್ವರ ಭೋವಿ–ವಡ್ಡರ ಸಂಘದ ಸಂಸ್ಥಾಪಕ ಅಧ್ಯಕ್ಷ ರವಿಚಂದ್ರ ಗುತ್ತೇದಾರ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏ.12ರಂದು ಬಾಲಕಿಯರಾದ ನಂದಿನಿ ಹಾಗೂ ಸಂಜನಾ ಬಹಿರ್ದೆಸೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಕುಟುಂಬದವರು ಗಾಬರಿಗೊಂಡು ರಾತ್ರಿ ಪೂರ್ತಿ ಗ್ರಾಮದಲ್ಲಿ ಹುಡುಕಾಡಿದ್ದರು. ಆದರೂ ಅವರ ಸುಳಿವು ಸಿಕ್ಕಿರಲಿಲ್ಲ. ಏ.13ರಂದು ಬೆಳಿಗ್ಗೆ 10 ಗಂಟೆಗೆ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಶವಗಳು ಪತ್ತೆಯಾಗಿದ್ದವು’ ಎಂದರು.

‘ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಂತರ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು. ಬಾಲಕಿಯರ ಸಾವಿನ ಸುತ್ತ ಅನುಮಾನಗಳು ಹುಟ್ಟುಕೊಂಡಿದ್ದು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಕಾಂತ ಗುತ್ತೇದಾರ, ಭೀಮಾಶಂಕರ, ಸಂಜು, ಶ್ರೀಹರಿ ಜಾಧವ, ಮಲ್ಲಿಕಾರ್ಜುನ ದೊಡ್ಡ ಮನಿ, ಮೌನೇಶ, ಪರುಶುರಾಮ, ನರಸಪ್ಪ ಭೋವಿ, ಗಂಗಪ್ಪ ಭೋವಿ, ಲಕ್ಷ್ಮಿ ಬಾಯಿ, ಈರಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-34-1445150353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.