ಕಲಬುರಗಿ: ಆಳಂದದ ಲಾಡ್ಲೆ ಮಶಾಕ್ ದರ್ಗಾದ ಆವರಣದ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣದ ವೇಳೆ 2022ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಖಂಡಿಸಿ ಶಿವಸೇನಾ ಪಕ್ಷ ಹಾಗೂ ಹಿಂದುತ್ವ ಪರ ಸಂಘಟನೆಗಳು ಸೋಮವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದವು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಕೈಯಲ್ಲಿ ಭಗವಾಧ್ವಜ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ತಮಟೆಗಳನ್ನು ಬಾರಿಸುತ್ತ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ರ್ಯಾಲಿ ನಡೆಸಿದರು.

‘ಶಾಸಕಾಂಗ, ಕಾರ್ಯಾಂಗದ ಮೇಲೆ ದಾಳಿ ಮಾಡಿದವರನ್ನು ಕಾಪಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ’, ‘ದೇಶದ್ರೋಹಿಗಳ ರಕ್ಷಣೆಗೆ ನಿಂತ ಸಿದ್ದರಾಮಯ್ಯನವರಿಗೆ ಧಿಕ್ಕಾರ’, ‘ದೇಶದ್ರೋಹಿಗಳ ರಕ್ಷಣೆಗೆ ನಿಂತ ಕನೀಜ್ ಫಾತಿಮಾರವರಿಗೆ ಧಿಕ್ಕಾರ’ ಎಂದೆಲ್ಲ ಬರೆದ ಭಿತ್ತಿ ಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಶಿವಸೇನೆ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ, ‘2022ರಲ್ಲಿ ಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿ ನಡೆದ ಗಲಾಟೆಯಲ್ಲಿ ಸಾಧು–ಸಂತರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಸಂಬಂಧ ಎಂಟು ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಗೂಂಡಾ ಕಾಯ್ದೆಯಡಿ ಒಂದು ವರ್ಷ ಜೈಲಿನಲ್ಲಿದ್ದ ವ್ಯಕ್ತಿಯ ಪ್ರಕರಣವೂ ಅದರಲ್ಲಿ ಸೇರಿದೆ. ಆ ಮೂಲಕ ಗೂಂಡಾಗಳ ರಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಇದು ಖಂಡನೀಯ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರೈತರು, ಕನ್ನಡಪರ ಸಂಘಟನೆಗಳ ಮೇಲಿನ ಪ್ರಕರಣ ಹಿಂಪಡೆದಿದ್ದು ಸರಿ. ಆದರೆ, ರಾಜ್ಯದ ಪೊಲೀಸರು, ಕೇಂದ್ರ ಸಚಿವರ ಮೇಲೆ ದಾಳಿ ನಡೆಸಿದವರ ವಿರುದ್ಧದ ಪ್ರಕರಣ ಹಿಂಪಡೆಯುವುದಾದರೆ ರಾಜ್ಯದಲ್ಲಿ ಎಂಥ ಆಡಳಿತ ನಡೆಯುತ್ತಿದೆ? ದುಂಡಾವರ್ತನೆ ತೋರುವವರನ್ನು ನೀವು ಬೆಂಬಲಿಸುತ್ತಿದ್ದೀರಾ? ಇದು ಅಕ್ಷಮ್ಯ. ರಾಜ್ಯ ಸರ್ಕಾರ ಕೂಡಲೇ ತನ್ನ ಪ್ರಕರಣ ರದ್ದು ನಿರ್ಧಾರದಿಂದ ಹಿಂದೆ ಸರಿಯಬೇಕು. ಅವರಿಗೆ ಕೋರ್ಟ್ನಿಂದ ಶಿಕ್ಷೆ ಕೊಡಿಸಬೇಕು. ಇಲ್ಲದಿದ್ದರೆ ನಾವು ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರುತ್ತೇವೆ’ ಎಂದರು.

ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ ಮಾತನಾಡಿ, ‘ಆಳಂದ ಶಾಸಕ ಬಿ.ಆರ್.ಪಾಟೀಲರು ಹಿಂದೆ ನಿಂತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮೂಲಕ ಶಿಫಾರಸು ಕಳಿಸಿ ಮುಸ್ಲಿಮರ ಮೇಲಿನ ಪ್ರಕರಣ ಹಿಂಪಡೆಯಲು ಹುನ್ನಾರ ನಡೆಸಿದ್ದಾರೆ. ಎಂಟು ಪ್ರಕರಣಗಳ ಪೈಕಿ ನಮ್ಮ ಕಾರಿನ ಚಾಲಕ ಹಾಗೂ ಮಾಧ್ಯಮದವರೊಬ್ಬರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಎರಡು ವೈಯಕ್ತಿಕ ಪ್ರಕರಣಗಳೂ ಇವೆ. ವೈಯಕ್ತಿಕ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿಲ್ಲ. ಇದು ಸಂವಿಧಾನ ಬಾಹಿರ ಕೆಲಸ. ಇದನ್ನು ಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು’ ಎಂದರು.

ಪ್ರತಿಭಟನೆಯಲ್ಲಿ ಪಾಳಾದ ಶಿವಮೂರ್ತಿ ಶಿವಾಚಾರ್ಯ, ಓಂಕಾರ ಬೆಣ್ಣೂರ ಶ್ರೀ, ಭಾಗೀರಥಿ ಗುನ್ನಾಪುರ, ಎಂ.ಎಸ್.ಪಾಟೀಲ ನರಿಬೋಳ, ವಿಜಯ ಪಾಟೀಲ, ಗುರುಶಾಂತ ಟೆಂಗಳಿ, ಶಿವಸೇನಾ ಯುವ ಘಟಕದ ಅಧ್ಯಕ್ಷ ರಾಕೇಶ ಜಮಾದಾರ, ಮಲ್ಲಣ್ಣ ಹಿರೇಪೂಜಾರಿ, ಮಡಿವಾಳಪ್ಪ ಅಮ ರಾವತಿ, ಮಲ್ಲನಗೌಡ ಮಾಲಿಪಾಟೀಲ, ರೋಹಿತ ಪಿಸ್ಕೆ, ಚನ್ನಾರೆಡ್ಡಿಗೌಡ, ಶಿವರಾಜ ಬಾಳಿ, ಸುರೇಶ ತಳವಾರ, ಮಹೇಶ ಗೌಳಿ, ಪ್ರದೀಪ ಹೇರೂರು, ಭಗವಂತ ನೆಲೋಗಿ, ಭಾಗ್ಯವಂತ ಯಡ್ರಾಮಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-34-857138541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.