ಕಲಬುರಗಿ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂನ್ 28ರಂದು ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ‘ಹೈ ರಿಸ್ಕ್’ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಹೆದ್ದಾರಿಗಳ ಚೆಕ್ಪೋಸ್ಟ್ಗಳ ಮೇಲೆ ತೀವ್ರ ನಿಗಾವಹಿಸಬೇಕು’ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಹೇಳಿದರು.

‘28ರಂದು ಜಿಲ್ಲೆಯಾದ್ಯಂತ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು. ಜೂನ್ 29, 30, ಜುಲೈ 1 ರವರೆಗೆ ಮೂರು ದಿನಗಳವರೆಗೆ 1,475 ತಂಡಗಳು ಲಸಿಕೆ ಹಾಕದ ಮಕ್ಕಳ ಪತ್ತೆಗೆ ಮನೆ ಮನೆಗೆ ಭೇಟಿ ನೀಡಿ, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು. ಯಾವುದೇ ಮಗುವೂ ಲಸಿಕೆಯಿಂದ ವಂಚಿತವಾಗಬಾರದು’ ಎಂದು ಹೇಳಿದರು.

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು ಅಂದಾಜು 3,51,716 ಮಕ್ಕಳಿಗೆ ಲಸಿಕೆ ಹಾಕಲು ಗುರಿ ನೀಡಲಾಗಿದೆ. ಮಕ್ಕಳಿಗೆ ಲಸಿಕೆ ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 1,519 ಲಸಿಕಾ ಕೇಂದ್ರಗಳಿಂದ (ಬೂತ್ಗಳು) ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಇದಕ್ಕಾಗಿ 3,364 ಲಸಿಕೆ ಹಾಕುವ ಸಿಬ್ಬಂದಿ ಹಾಗೂ 334 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 132 ಟ್ರಾನ್ಸಿಟ್ ತಂಡಗಳು ಹಾಗೂ ದೂರದ ಪ್ರದೇಶಗಳಿಗಾಗಿ 31 ಸಂಚಾರಿ ತಂಡಗಳು ಕಾರ್ಯಾಚರಣೆ ನಡೆಸಲಿವೆ. ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಅವರು ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-31-821515077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.