ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ: ಇಬ್ಬರಿಗೆ 30 ವರ್ಷ ಜೈಲು

Published 10 ಜೂನ್ 2024, 20:12 IST
Last Updated 10 ಜೂನ್ 2024, 20:12 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದು ಸಾಬೀತಾಗಿದ್ದರಿಂದ ಇಬ್ಬರು ಅಪರಾಧಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 30 ವರ್ಷ ಜೈಲು ಶಿಕ್ಷೆ ವಿಧಿಸಿದೆ. ತಲಾ ₹ 20 ಸಾವಿರ ದಂಡ ವಿಧಿಸಿದೆ.

ನಗರದ ಮಿಲ್ಲತ್ ನಗರದ ಖಂಡಾಲಾ ಗ್ರೌಂಡ್ ನಿವಾಸಿ ಸೈಯದ್ ಅಮಾನ್ ಅಲಿ (19) ಹಾಗೂ ಬಿಲಾಲಾಬಾದ್ ಕಾಲೊನಿ ನಿವಾಸಿ ಸೈಯದ್ ತಲಹಾ ನೂಮಾನ್ (22) ಶಿಕ್ಷೆಗೊಳಗಾದ ಅಪರಾಧಿಗಳು.

2020ರ ಫೆಬ್ರುವರಿ 10ರಂದು ರಾತ್ರಿ ವೇಳೆ ಬಾಲಕಿ ಮನೆಯ ಚಾವಣಿ ಮೇಲೆ ತಿರುಗಾಡುತ್ತಿದ್ದುದನ್ನು ಗಮನಿಸಿದ ಇಬ್ಬರು ಯುವಕರು ಅತ್ಯಾಚಾರ ಮಾಡಿದ್ದರು. ಸೈಯದ್ ತಲಹಾ ನೂಮಾನ್ ಅತ್ಯಾಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಸೈಯದ್ ಅಮಾನ್ ಅಲಿ ಮೊಬೈಲ್ ಹಿಡಿದು ವಿಡಿಯೊ ಚಿತ್ರೀಕರಣ ಮಾಡುತ್ತೇನೆಂದು ಬೆದರಿಕೆ ಹಾಕಿದ್ದ. ನಂತರ ಸೈಯದ್ ಅಮಾನ್ ಅಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಿದ್ದಾಗ ಸೈಯದ್ ತಲಹಾ ವಿಡಿಯೊ ಚಿತ್ರೀಕರಣ ಮಾಡಿದಂತೆ ನಟಿಸಿದ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೊ ಬಹಿರಂಗ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು.

ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಿಲೀಪ್ ಸಾಗರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ ₹ 7 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT