ಕಲಬುರಗಿ: ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ 3ನೇ ಬಾರಿಗೆ ರಾಷ್ಟ್ರಕೂಟ ಉತ್ಸವ ಹಾಗೂ ಕಲ್ಯಾಣ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ಕನ್ನಡ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಉದ್ಘಾಟಿಸಿ, ‘ರಾಷ್ಟ್ರಕೂಟ ಸಾಮ್ರಾಜ್ಯವು ವಿಶ್ವದ ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದಾಗಿತ್ತು. ಚಕ್ರವರ್ತಿ ಅಮೋಘವರ್ಷ ಎಲ್ಲ ಕ್ಷೇತ್ರಗಳಲ್ಲೂ ಅಪಾರ ಕೊಡುಗೆ ನೀಡಿದ್ದಾರೆ. ಮಳಖೇಡದ ವೈಭವವನ್ನು ಉಳಿಸಿ ಬೆಳೆಸಬೇಕು. ಅಲ್ಲಿನ ಕೋಟೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು’ ಎಂದು ಒತ್ತಾಯಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಲ್ಯಾಣ ನಾಡು ವಿಕಾಸ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್. ನಡಗೇರಿ, ‘ಹಂಪಿ, ಬದಾಮಿ, ಬನವಾಸಿ, ಬೇಲೂರಿಗೆ ಸಿಕ್ಕ ಪ್ರಾತಿನಿಧ್ಯ ಮಳಖೇಡಕ್ಕೆ ಸಿಗದೇ ಇರುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಕಾರಣ. ರಾಜ್ಯ ಸರ್ಕಾರವು ಇತಿಹಾಸ ಕ್ಷೇತ್ರದಲ್ಲೂ ಕಲ್ಯಾಣ ಕರ್ನಾಟಕ ಭಾಗದ ಅರಸರು ಮತ್ತು ಸಾಮ್ರಾಜ್ಯಗಳನ್ನು ಕಡೆಗಣಿಸಿದೆ’ ಎಂದು ಹೇಳಿದರು.

ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿ, ಸರ್ಕಾರ ಮಾಡಬೇಕಿದ್ದ ಉತ್ಸವವನ್ನು ಸಂಘಟನೆ ನಡೆಸುತ್ತಿರುವುದು ವಿಷಾದಕರ ಸಂಗತಿ. ರಾಷ್ಟ್ರಕೂಟರ ಇತಿಹಾಸವನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕು ಎಂದರು.

ಮಳಖೇಡದ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಅಧ್ಯಕ್ಷತೆಯನ್ನು ಕೆಕೆಸಿಸಿಐ ಗೌರವ ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ ವಹಿಸಿದ್ದರು. ನಾಡದೇವತೆ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಲಕ್ಷ್ಮಣ ದಸ್ತಿ ಹಾಗೂ ಚಕ್ರವರ್ತಿ ಅಮೋಘವರ್ಷ ನೃಪತುಂಗರ ಭಾವಚಿತ್ರಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಕಲ್ಯಾಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಸಾಪ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪ್ರಗತಿಪರ ಚಿಂತಕ ಸುನೀಲ ಕುಲಕರ್ಣಿ, ವೇದಿಕೆಯ ಜಿಲ್ಲಾ ಅಧ್ಯಕ್ಷ ಬಾಬು ಮದನಕರ, ಜೈಭೀಮ ಮಾಳಗೆ, ಅರುಣ ತಾವಡೆ, ದೇವು ದೊರೆ, ಸಿದ್ದಲಿಂಗ ಉಪ್ಪಾರ, ಶ್ರೀಧರ ಪೋದ್ದಾರ, ಲೋಹಿತ ನೀಲೂರೆ, ಅಬ್ದುಲ್ ಶೇಖ್, ಶ್ರೀಶೈಲ ಪೂಜಾರಿ, ಪುಟ್ಟು ಸಿರಸಗಿ, ಆಕಾಶ ಭೀಮಳ್ಳಿ, ಪ್ರಶಾಂತ ಗಾಯಕವಾಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿಜಯಕುಮಾರ ಕಂಬಾರ ನಿರೂಪಿಸಿದರು. ನಾಗು ಡೊಂಗರಗಾಂವ ಸ್ವಾಗತಿಸಿದರು. ಮಲ್ಲು ದೊರೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-34-1485230080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.