ಕಾಳಗಿ: ರಟಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಯಾರ ಗಮನಕ್ಕೂ ತರದೆ, ಡಂಗೂರ ಸಾರದೆ, ಕಾನೂನುಬದ್ಧ ಟೆಂಡರ್ ಪ್ರಕ್ರಿಯೆ ಮಾಡದೆ ಸಹಕಾರ ಸಂಘಕ್ಕೆ ಸೇರಿದ್ದ ಟ್ರ್ಯಾಕ್ಟರ್ ಮಾರಾಟ ಮಾಡಿದ್ದು, ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಈಚೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು ಹಾಗೂ ರೈತರು ಗ್ರಾ.ಪಂ ಕಚೇರಿ ಮುಂದೆ ಧರಣಿ ನಡೆಸಿದರು.

‘ಗ್ರಾಮೀಣ ಪ್ರದೇಶದ ರೈತರು ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗಳು ಮಾಡಿಕೊಳ್ಳಲು ರಟಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಂಟಿ ಕೃಷಿ ನಿರ್ದೇಶಕರು ಟ್ರ್ಯಾಕ್ಟರ್ ನೀಡಿದ್ದರು. ಈ ಟ್ರ್ಯಾಕ್ಟರ್ನ್ನು ಜಾಗದ ಸಮಸ್ಯೆಯಿಂದಾಗಿ ಗ್ರಾ.ಪಂ ಆವರಣದಲ್ಲಿ ನಿಲ್ಲಿಸಲಾಗಿದ್ದ ನಮ್ಮ ಟ್ರ್ಯಾಕ್ಟರ್ ಜತೆಗೆ ಪಂಚಾಯಿತಿಗೆ ಸಂಬಂಧಪಟ್ಟ ಮೋಟಾರ್ಗಳು ತಮಗೆ ಬೇಕಾದವರಿಗೆ ಮಾರಾಟ ಮಾಡಿದ್ದಾರೆ’ ಎಂದು ದೂರಿದರು.

‘ಈ ಎಲ್ಲವನ್ನು ಆಧರಿಸಿ ಪಿಡಿಒ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಿ ಸೇವೆಯಿಂದ ಅಮಾನತುಗೊಳಿಸಬೇಕು. ಸರ್ಕಾರಿ ಜಾಗದಲ್ಲಿ ಅನಧಿಕೃತ ವ್ಯಕ್ತಿಗಳು ಅಂಗಡಿಗಳು ನಿರ್ಮಾಣ ಮಾಡಿದ್ದು, ಇದರಿಂದ ಸಂಘದ ಕಾರ್ಯಚಟುವಟಿಕೆಗಳಿಗೆ ಅನಾನುಕೂಲವಾಗುತ್ತಿದೆ. ಆದ್ದರಿಂದ ಅಂಗಡಿಗಳನ್ನು ತೆರವುಗೊಳಿಸಿ ಸಂಘದ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ತಾ.ಪಂ ಇಒ ಬಸಲಿಂಗಪ್ಪ ಡಿಗ್ಗಿ ಅವರಿಗೆ ಮನವಿ ಮಾಡಿದರು.

ಕ್ರಮಕ್ಕೆ ವಿಳಂಬ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪ್ರತಿಭಟನಕಾರರು ತಿಳಿಸಿದರು.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರೇವಣಸಿದ್ಧ ಬಡಾ, ಕಾಶಿನಾಥ ಚೋಕಾ, ಶರಣಬಸಪ್ಪ ಮಾಮಶೆಟ್ಟಿ, ವೀರಣ್ಣ ಗಂಗಾಣಿ, ಶಿವರಾಜ ಪಾಟೀಲ ಗೊಣಗಿ, ಕಲ್ಯಾಣರಾವ ತಳಕೇರಿ, ಗುಂಡಯ್ಯ ಸ್ವಾಮಿ ಮಠಪತಿ, ಮಲ್ಲಿಕಾರ್ಜುನ ಬುಳ್ಳಾ, ಮಲ್ಲು ಮರುಗುತ್ತಿ, ವಿಜಯಕುಮಾರ ಚೇಂಗಟಿ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-31-354578037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.