ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿರ್ಮೂಲನೆಗಾಗಿ ಮುಂಬರುವ ರಾಜ್ಯ ಬಜೆಟ್ನಲ್ಲಿ ಐತಿಹಾಸಿಕ ಪ್ರಮಾಣದ ಅನುದಾನ ಹಾಗೂ ಕ್ರಮಗಳ ಕುರಿತು ಕೆಕೆಸಿಸಿಐ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

‘ಪ್ರಾದೇಶಿಕ ಅಸಮತೋಲನದ ಪರಿಣಾಮವಾಗಿ ಕಲ್ಯಾಣ ಕರ್ನಾಟಕದ ಜನತೆ ಆರ್ಥಿಕ, ಶೈಕ್ಷಣಿಕ, ಕೈಗಾರಿಕಾ, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕದಲ್ಲೇ ಶಾಶ್ವತ ಕಾರ್ಯಾಲಯವನ್ನು ಸ್ಥಾಪಿಸಿ, ಪ್ರತ್ಯೇಕ ಆಡಳಿತಾತ್ಮಕ ವ್ಯವಸ್ಥೆ ಮೂಲಕ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸಬೇಕು. ನಿರ್ಧಾರ ಪ್ರಕ್ರಿಯೆ ಸ್ಥಳೀಯ ಮಟ್ಟದಲ್ಲೇ ನಡೆದರೆ ಅಭಿವೃದ್ಧಿಗೆ ವೇಗ ಬರುತ್ತದೆ. ಸಾಮಾನ್ಯ ಇಲಾಖಾ ವೆಚ್ಚಗಳಿಂದ ವಿಭಿನ್ನವಾಗಿ, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಮರ್ಪಿತ ಅನುದಾನವನ್ನು ಮೀಸಲಿಟ್ಟು, ಅದರ ಬಳಕೆಗೆ ವಾರ್ಷಿಕ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮ ಮೌಲ್ಯಮಾಪನ ವ್ಯವಸ್ಥೆ ರೂಪಿಸಬೇಕು. 371(ಜೆ) ಅಡಿಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಭರ್ತಿ ಮಾಡಬೇಕು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಇದು ಮೊದಲ ಹೆಜ್ಜೆಯಾಗುತ್ತದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಕೈಗಾರಿಕಾ ಮತ್ತು ಆರ್ಥಿಕ ಅಭಿವೃದ್ಧಿಗೆ ವಿಶೇಷ ಆರ್ಥಿಕ ವಲಯಗಳ ಸ್ಥಾಪನೆಯಾಗಬೇಕು. ಪ್ರತ್ಯೇಕ ರೈಲ್ವೆ ವಿಭಾಗ ಸ್ಥಾಪನೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ವಿಮಾನ ಮಾರ್ಗಗಳು, ಕಾರ್ಗೊ ಸೇವೆ ಮತ್ತು ಲಾಜಿಸ್ಟಿಕ್ ಸೌಲಭ್ಯಗಳನ್ನು ಪ್ರಾರಂಭಿಸಿ ವ್ಯಾಪಾರ ಚಟುವಟಿಕೆಗಳನ್ನು ವಿಸ್ತರಿಸಬೇಕು. ಕೇಂದ್ರದ ಸಹಕಾರದೊಂದಿಗೆ ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸಿ, ಹತ್ತಿ ಉತ್ಪಾದಕರಿಗೆ ಮೌಲ್ಯವರ್ಧನೆ ಸೌಲಭ್ಯ ಒದಗಿಸಬೇಕು. ಪ್ಲಗ್-ಅಂಡ್-ಪ್ಲೇ ಕೈಗಾರಿಕಾ ಉದ್ಯಾನಗಳು ಮತ್ತು ಲಾಜಿಸ್ಟಿಕ್ ಹಬ್ಗಳನ್ನು ಸ್ಥಾಪಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.

ಏಮ್ಸ್ ಸ್ಥಾಪನೆ, ಸಾರ್ವಜನಿಕ ಆರೋಗ್ಯ ಕೇಂದ್ರಗಳ ವಿಸ್ತರಣೆ, ಕೌಶಲ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳ ಬಗ್ಗೆ ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.