ಕಲಬುರಗಿ: ನಗರದ ಗಂಜ್ ಪ್ರದೇಶದ ಹುಮನಾಬಾದ್ ರಸ್ತೆಯಲ್ಲಿರುವ ಗಾಂಧಿ ನಗರದಲ್ಲಿ ಮೇ 11ರಂದು ರೇವಣಸಿದ್ಧೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಅಂಗವಾಗಿ ಹಮ್ಮಿಕೊಂಡಿರುವ ಐದು ದಿನಗಳ ಪ್ರವಚನ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರೆತಿದೆ.

ದೇವಸ್ಥಾನದ ಆವರಣದಲ್ಲಿ ಗುರುವಾರ ಸಂಜೆ 7 ಗಂಟೆಗೆ ಬ್ರಹ್ಮಪುರದ ರಾಜಶೇಖರ ಶಿವಾಚಾರ್ಯ ಹಾಗೂ ಹಿರೇರೋಜಾದ ಕೆಂಚಬಸವ ಶಿವಾಚಾರ್ಯರು ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದರು. ರಟಕಲ್ನ ಶಂಭುಲಿಂಗ ಶಾಸ್ತ್ರಿಗಳು ಪ್ರವಚನ ನೀಡಿದರು. ಮೇ11ರ ತನಕ ನಿತ್ಯ ಸಂಜೆ 7 ಗಂಟೆಗೆ ಜರುಗಲಿದೆ. ಮೇ 11ರಂದು ಬೆಳಿಗ್ಗೆ 5 ಗಂಟೆಗೆ ರೇವಣಸಿದ್ಧೇಶ್ವರ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ವಿವಿಧ ಸ್ವಾಮೀಜಿಗಳು ಸಾನ್ನಿಧ್ಯವಹಿಸುವರು. ಅಂದು ಬೆಳಿಗ್ಗೆ 11 ಗಂಟೆಗೆ ಧರ್ಮ ಸಭೆ ಜರುಗಲಿದೆ. ಮಧ್ಯಾಹ್ನ 12.30ರಿಂದ ಅನ್ನ ಸಂತರ್ಪಣೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-34-1385978147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.