ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ತುಂಬಲು ₹306 ಕೋಟಿ ಹಣ ಬಿಡುಗಡೆ: ಡಾ.ಅಜಯ್‌ಸಿಂಗ್

Published 26 ಏಪ್ರಿಲ್ 2024, 4:31 IST
Last Updated 26 ಏಪ್ರಿಲ್ 2024, 4:31 IST
ಅಕ್ಷರ ಗಾತ್ರ

ಕಲಬುರಗಿ: ‘ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿರುವ ಎಲ್ಲ 5 ಗ್ಯಾರಂಟಿಗಳನ್ನು ಜಾರಿಗೆ ತಂದು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ’ ಎಂದು ಜೇವರ್ಗಿ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಡಾ.ಅಜಯ್‌ಸಿಂಗ್ ಹೇಳಿದರು.

ಯಡ್ರಾಮಿ ತಾಲ್ಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಗ್ಯಾರಂಟಿಗಳನ್ನು ಜನತೆಗೆ ನೀಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆಗೆ ₹306 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ₹365 ಕೋಟಿ ವೆಚ್ಚದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಚುನಾವಣೆ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.

‘ನನಗೆ ಬೆಂಬಲ ನೀಡಿದಂತೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಹೆಚ್ಚಿನ ಮತ ನೀಡಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ್, ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಕುಂಪಟೇಲ್ ಇಜೇರಿ, ರಾಜಶೇಖರ್ ಸಿರಿ, ಶಾಂತಪ್ಪ ಕೂಡ್ಲಿಗಿ, ಚಂದ್ರಶೇಖರ್ ಹರನಾಳ, ವಸಂತ ನರಿಬೋಳ, ಅರಳಗುಂಡಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರಾದ ಶರಣಗೌಡ ಹಿರೇಗೌಡರ, ರೇವಣಸಿದ್ದಪ್ಪಗೌಡ ಕಮಾನಮನಿ, ನಿಂಗರಾಜ್ ಕಡಿ, ಶಿವನಗೌಡ ಪೊಲೀಸ್‌ಪಾಟೀಲ, ಮಲ್ಲಿನಾಥ ತೋಳನೂರ, ರುದ್ರಗೌಡ ಪಾಟೀಲ, ಕಾಶಿನಾಥ್ ಹಳಿಮನಿ ಸೇರಿ ನೂರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT