ಕಲಬುರಗಿ: ‘ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಆಗಸ್ಟ್ 21, 22 ಮತ್ತು 23ರಂದು ‘ಸಮಾಧಾನ ಸಮಾರೋಹ’ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕಲಬುರಗಿ ಜಿಲ್ಲೆಯಲ್ಲಿ 268 ಪ್ರಕರಣಗಳನ್ನು ರಾಜೀ ಪ್ರಕ್ರಿಯೆಗಾಗಿ ಗುರುತಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ತಿಳಿಸಿದರು.

‘ಸಮಾಧಾನ ಸಮಾರೋಹ’ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್, ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಆರ್.ದೇವದಾಸ್ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿದ ನಂತರ ನ್ಯಾ. ನವಲೆ ಅವರು ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಮಾಹಿತಿ ನೀಡಿದರು.

‘ಬ್ಯಾಂಕಿಂಗ್ ಮತ್ತು ವಿಮೆ, ನಾಗರಿಕ ಕಾನೂನು, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಗ್ರಾಹಕ ವ್ಯಾಜ್ಯ ಮತ್ತು ರೇರಾ, ಕ್ರಿಮಿನಲ್ ಪ್ರಕರಣ, ಕೌಟುಂಬಿಕ ವಿವಾದ, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನು ವಿವಾದ ಸೇರಿದಂತೆ ರಾಜ್ಯದಲ್ಲಿ 4,328 ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಲಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಗುರುತಿಸಿದ 268 ಪ್ರಕರಣಗಳಲ್ಲದೇ ಆಸಕ್ತರು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಸಹ ಪರಿಹರಿಸಿಕೊಳ್ಳಲು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ನೋಂದಣಿ ಆರಂಭವಾಗಿದೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕಾರರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ’ ಎಂದು ತಿಳಿಸಿದರು.

‘ರಾಜೀ ಸಂಧಾನದಲ್ಲಿ ಭಾಗವಹಿಸಲು ವಿಡಿಯೊ ಕಾನ್ಫರೆನ್ಸ್ ಸೌಲಭ್ಯ ಸಹ ಇರುತ್ತದೆ. ಅದಾಲತ್ನಲ್ಲಿ ರಾಜೀಯಾಗುವ ಪ್ರಕರಣಗಳಿಗೆ ಕೋರ್ಟ್ನಲ್ಲಿ ಪಾವತಿಸಿರುವ ಶುಲ್ಕವನ್ನು ವಾಪಸಾತಿ ಮಾಡಲಾಗುತ್ತದೆ. ಕಡಿಮೆ ವೆಚ್ಚದಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರಿಗೆ ಸಿಕ್ಕಿರುವ ಸದಾವಕಾಶವಾಗಿದೆ. ಇದರಿಂದ ದೆಹಲಿಗೆ ಹೋಗುವುದು ತಪ್ಪುತ್ತದೆ. ಸಮಯ ಮತ್ತು ಹಣ ಎರಡೂ ಉಳಿತಾಯವಾಗುತ್ತದೆ. ಜೊತೆಗೆ ಉಭಯ ಪಕ್ಷಗಳ ನಡುವೆ ಸೌಹಾರ್ದ ಉಳಿಯುತ್ತದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-1085301990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.