ಕಲಬುರಗಿ: ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಪಂಚಾಯಿತಿ ಸಿಇಒ ಭವಂರ್ ಸಿಂಗ್ ಮೀನಾ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಗ್ರಾಮೀಣ ಯುವಕರ ಜೀವನದಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಇಲ್ಲಿ ತರಬೇತಿ ಪಡೆದವರು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಸುವವರಾಗುತ್ತಿದ್ದಾರೆ’ ಎಂದು ಹೇಳಿದರು.

ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕ ದೇವಕಿನಂದನ್ ಖಂಡೇಲ್ವಾಲ್ ಮಾಡನಾಡಿ, ‘ತರಬೇತಿ ನೀಡುವುದಷ್ಟೇ ನಮ್ಮ ಉದ್ದೇಶವಲ್ಲ, ಗ್ರಾಮೀಣ ಯುವಕರನ್ನು ಆತ್ಮನಿರ್ಭರ ಉದ್ಯಮಿಗಳಾಗಿ ರೂಪಿಸುವುದು ನಮ್ಮ ಧ್ಯೇಯ’ ಎಂದರು.

‘1997ರಲ್ಲಿ ಸ್ಥಾಪನೆಯಾದ ಸಂಸ್ಥೆ ಇಂದಿನವರೆಗೆ 25,000ಕ್ಕೂ ಹೆಚ್ಚು ಗ್ರಾಮೀಣ ಯುವಕರಿಗೆ ವಿವಿಧ ಕೌಶಲಾಭಿವೃದ್ಧಿ ತರಬೇತಿ ನೀಡಿದೆ. ಬಹುತೇಕರು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸದೃಢರಾಗಿದ್ದಾರೆ. 70ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳು ಲಭ್ಯ ಇವೆ’ ಎಂದು ಮಾಹಿತಿ ನೀಡಿದರು.

ನಬಾರ್ಡ್ ಡಿಡಿಎಂ ಲೋಹಿತ್ ಪಿ. ಮಾತನಾಡಿ, ‘ಕೌಶಲಾಭಿವೃದ್ಧಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ, ಈ ದಿಶೆಯಲ್ಲಿ ಆರ್ಸೆಟಿ ಶ್ಲಾಘನೀಯ ಕಾರ್ಯ ಮಾಡುತ್ತಿದೆ’ ಎಂದು ಹೇಳಿದರು.

ಲೀಡ್ ಜಿಲ್ಲಾ ವ್ಯವಸ್ಥಾಪಕ ರವಿಗೌಡ, ಜಿ.ಪಂ ಯೋಜನಾ ನಿರ್ದೇಶಕ ಜಗದೇವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-247975432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.